ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಗೋಳಿತೊಟ್ಟು ವಲಯ: ರಾಮಕುಂಜದಲ್ಲಿ ಸಾಮೂಹಿಕ ಶ್ರೀ ಶನೀಶ್ವರ ಪೂಜೆ ಮತ್ತು ಧಾರ್ಮಿಕ ಕಾರ್ಯಕ್ರಮ

ಶೇರ್ ಮಾಡಿ

ರಾಮಕುಂಜ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಡಬ ತಾಲೂಕಿನ ಗೋಳಿತೊಟ್ಟು ವಲಯದ ರಾಮಕುಂಜದಲ್ಲಿ ಇಂದು ಸಾಮೂಹಿಕ ಶ್ರೀ ಶನೀಶ್ವರ ಪೂಜೆ ಮತ್ತು ಧಾರ್ಮಿಕ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ದ. ಕ ಜಿಲ್ಲೆ ವಿಭಾಗ 2 ರ ನಿರ್ದೇಶಕರಾದ ಪ್ರವೀಣ್ ಕುಮಾರ್ ರವರು ನೆರವೇರಿಸಿ ಮಾಹಿತಿ ನೀಡಿದರು.

ಸಭಾಧ್ಯಕ್ಷತೆಯನ್ನು ಗೋಳಿತೊಟ್ಟು ವಲಯ ಒಕ್ಕೂಟದ ಅಧ್ಯಕ್ಷರಾದ ಬಾಲಕೃಷ್ಣ ಅಲೆಕ್ಕಿ ವಹಿಸಿದ್ದರು.ಮುಖ್ಯ ಅತಿಥಿಗಳಾಗಿ ಕಡಬ ತಾಲೂಕು ಕೇಂದ್ರ ಒಕ್ಕೂಟ ಸಮಿತಿಯ ಅಧ್ಯಕ್ಷ ರಾದ ಸಂತೋಷ್ ಕೆ, ತಾಲೂಕು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಅಧ್ಯಕ್ಷರಾದ ಮಹೇಶ್ ಕೆ ಸವಣೂರು ವಕೀಲರು , ರಾಮಕುಂಜ ಗ್ರಾಮಪಂಚಾಯತ್ ಅಧ್ಯಕ್ಷರಾದ ಸುಜೇತಾ, ಗೋಳಿತೊಟ್ಟು ಗ್ರಾಮಪಂಚಾಯತ್ ಅಧ್ಯಕ್ಷರಾದ ಸವಿತಾ , ರಾಮಕುಂಜೇಶ್ವರ ದೇವಾಸ್ಥಾನ ವ್ಯವಸ್ಥಾನ ಸಮಿತಿಯ ಅಧ್ಯಕ್ಷರಾದ ಗುರುಪ್ರಸಾದ್, ಜನಜಾಗೃತಿ ವೇದಿಕೆ ಗೋಳಿತೊಟ್ಟು ವಲಯದ ಅಧ್ಯಕ್ಷರಾದ ನೋಣಯ್ಯ ಪೂಜಾರಿ, ಗೋಳಿತೊಟ್ಟು ವಲಯ ಭಜನಾ ಪರಿಷತ್ ನ ಅಧ್ಯಕ್ಷರಾದ ಜಯಂತ್ ಅಂಬರ್ಚೆ , ಗೋಳಿತೊಟ್ಟು ವಲಯದ ಶ್ರೀ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣ ಘಟಕದ ಘಟಕ ಪ್ರತಿನಿಧಿ ಮಹೇಶ್ ಕೆ ಉಪಸ್ಥಿತರಿದ್ದರು.

ಕಡಬ ತಾಲೂಕು ಯೋಜನಾಧಿಕಾರಿ ಮೇದಪ್ಪ ನಾವೂರು ಪ್ರಸ್ತಾಪಿಸಿ ಸ್ವಾಗತಿಸಿದರು. ಗೋಳಿ ತೊಟ್ಟು ವಲಯದ ಮೇಲ್ವಿಚಾರಕರಾದ ಸುಜಾತ ವರದಿ ವಾಚಿಸಿದರು. ಗೋಳಿತೊಟ್ಟು ವಲಯದ ಒಕ್ಕೂಟದ ಅಧ್ಯಕ್ಷರಾದ ವಿರೇಂದ್ರ ಹಳೇನೆರಂಕಿ ವಂದಿಸಿದರು. ವಲಯದ ಸೇವಾ ಪ್ರತಿನಿಧಿಗಳು ಕಾರ್ಯಕ್ರಮದ ಯಶಸ್ವಿಗೆ ಸಹಕರಿಸಿದರು.

Leave a Reply

error: Content is protected !!