ಮದ್ಯ ಸೇವನೆ ಪ್ರಶ್ನಿಸಿದ್ದಕ್ಕೆ ಚೂರಿಯಿಂದ ಇರಿದು ಯುವಕನ ಹತ್ಯೆ

ಶೇರ್ ಮಾಡಿ

ಯುವಕನೋರ್ವನನ್ನು ಚೂರಿಯಿಂದ ಇರಿದು ಹತ್ಯೆ ನಡೆಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸೋಮೇಶ್ವರ ಪುರಸಭೆ ವ್ಯಾಪ್ತಿಯ ಸಾರಸ್ವತ ಕಾಲನಿ ಎಂಬಲ್ಲಿ ಬುಧವಾರ ತಡರಾತ್ರಿ ವೇಳೆ ಸಂಭವಿಸಿದೆ.

ಸಾರಸ್ವತ ಕಾಲನಿ ನಿವಾಸಿ ವರುಣ್ (28) ಹತ್ಯೆಯಾದವರು. ಸ್ಥಳೀಯ ಸೂರಜ್ ಎಂಬಾತ ಕೃತ್ಯ ಎಸಗಿರುವುದಾಗಿ ಪೊಲೀಸರು ಸಂಶಯ ವ್ಯಕ್ತಪಡಿಸಿದ್ದಾರೆ.

ಕೊಲ್ಯ ಜಾಯ್ಲಾಂಡ್ ಶಾಲೆ ಸಮೀಪ ತಡರಾತ್ರಿ ವೇಳೆ ಸೂರಜ್ ಹಾಗೂ ಇನ್ನಿಬ್ಬರು ಮದ್ಯಪಾನ ನಡೆಸುತ್ತಿರುವುದನ್ನು ವರುಣ್ ಪ್ರಶ್ನಿಸಿದ್ದರು. ಇದರಿಂದ ಐದು ಮಂದಿಯ ನಡುವೆ ವಾಗ್ವಾದ ನಡೆದು ಸೂರಜ್, ವರುಣ್ ಹೃದಯಭಾಗಕ್ಕೆ ಚೂರಿಯಿಂದ ತಿವಿದು ಹತ್ಯೆ ನಡೆಸಿದ್ದಾನೆ.

ಹಳೆ ವೈಷಮ್ಯದಿಂದ ಕೃತ್ಯ ನಡೆದಿರುವ ಸಾಧ್ಯತೆಗಳಿದ್ದು, ಸೋಮೇಶ್ವರ ಪುರಸಭೆಗೆ ಡಿ. 27 ಕ್ಕೆ ಚುನಾವಣೆಯೂ ನಡೆಯಲಿದ್ದು, ನಾಮಪತ್ರ ಸಲ್ಲಿಸಲು ಕೆಲವೇ ದಿನಗಳು ಬಾಕಿಯಿದೆ. ಈ ಸಂಬಂಧವೂ ಗಲಾಟೆ ನಡೆದಿರುವ ಸಾಧ್ಯತೆಯನ್ನು ಸ್ಥಳೀಯರು ವ್ಯಕ್ತಪಡಿಸಿದ್ದಾರೆ.

ಘಟನೆಯಲ್ಲಿ ಸೋಮೇಶ್ವರ ಗ್ರಾ.ಪಂ ಮಾಜಿ ಸದಸ್ಯ ರವಿರಾಜ್ ಎಂಬವರಿಗೂ ಗಾಯಗಳಾಗಿವೆ ಎಂದು ಪೊಲೀಸ್ ಮೂಲಗಳಿಂದ ತಿಳಿದುಬಂದಿದೆ.

Leave a Reply

error: Content is protected !!