ಯುವ ವಿಜ್ಞಾನಿಯೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರು ತಾಲೂಕಿನ ಆರ್ಯಾಪು ಗ್ರಾಮದ ಕಲ್ಲರ್ಪೆ ಎಂಬಲ್ಲಿ ಗುರುವಾರ ನಡೆದಿದೆ.
ಮೃತ ಯುವಕನನ್ನು ಕಲ್ಲರ್ಪೆ ನಿವಾಸಿ ಭರತ್ ಎಂದು ಗುರುತಿಸಲಾಗಿದೆ. ಭರತ್ ಅವರು ಹೈದರಾಬಾದ್ ನ ಡಿಆರ್ ಡಿಒ ಎಂಬ ಸಂಸ್ಥೆಯಲ್ಲಿ ವಿಜ್ಞಾನಿಯಾಗಿ ಕೆಲಸ ನಿರ್ವಹಿಸುತ್ತಿದ್ದರು. ಎರಡು ತಿಂಗಳ ಹಿಂದೆಯಷ್ಟೇ ಅವರು ಉದ್ಯೋಗಕ್ಕೆ ಸೇರಿಕೊಂಡಿದ್ದ ಭರತ್, ಕಳೆದ ಒಂದು ವಾರದ ಹಿಂದೆ ಊರಿಗೆ ಆಗಮಿಸಿದ್ದರು.
ಬುಧವಾರ ರಾತ್ರಿ ಫೋನ್ ಬಂದಿತ್ತು ಎಂದು ಕುಟುಂಬಸ್ಥರು ತಿಳಿಸಿದ್ದು, ಆ ಬಳಿಕ ಮಲಗಿದ್ದ ಭರತ್ ಅವರು ತಡರಾತ್ರಿ ಈ ಕೃತ್ಯ ಎಸಗಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.