ಬಳ್ಪ ಕಾಡಿನಲ್ಲಿ ಮಂಗಗಳ ಶವದ ರಾಶಿ

ಶೇರ್ ಮಾಡಿ

ಬಳ್ಪ ರಕ್ಷಿತಾರಣ್ಯದ ಮೂಲಕ ಹಾದು ಹೋಗುವ ಗುತ್ತಿಗಾರು-ಬಳ್ಪ ರಸ್ತೆ ಬದಿಯಲ್ಲಿ ಮಂಗಗಳ ಶವ ಪತ್ತೆಯಾಗಿವೆ. ಸುಮಾರು 30ಕ್ಕೂ ಅಧಿಕ ಮಂಗಗಳು ಸತ್ತು ಬಿದ್ದಿರುವ ಸ್ಥಿತಿಯಲ್ಲಿದೆ. ಗುರುವಾರ ಮಧ್ಯಾಹ್ನದ ವೇಳೆ ಸಾಮಾಜಿಕ ಜಾಲತಾಣದ ಮೂಲಕ ಮಂಗಗಳ ಶವ ಇರುವುದು ಬೆಳಕಿಗೆ ಬಂದಿದೆ. ಸ್ಥಳಕ್ಕೆ ಅರಣ್ಯ ಇಲಾಖೆಯ ಸಿಬ್ಬಂದಿ ಆಗಮಿಸಿದ್ದಾರೆ. ಮಂಗಗಳನ್ನು ಕೊಂದು ಕಾಡೊಳಗೆ ತಂದು ಹಾಕಿರುವ ಶಂಕೆ ವ್ಯಕ್ತವಾಗಿದ್ದು, ಅರಣ್ಯ ಇಲಾಖೆ ತನಿಖೆ ನಡೆಸುತ್ತಿದೆ.

ಮಂಗಗ ಶವವನ್ನು ಯೇನೆಕಲ್ಲು ನರ್ಸರಿಗೆ ಸಾಗಾಟ ಮಾಡಿದ್ದು, ಶುಕ್ರವಾರ ಶವಗಳ ಮರಣೋತ್ತರ ಪರೀಕ್ಷೆ ನಡೆಯಲಿದ್ದು, ಬಳಿಕವೇ ಮಂಗಗಳ ಸಾವಿಗೆ ಕಾರಣ ತಿಳಿದುಬರಲಿದೆ. ಅರಣ್ಯ ಇಲಾಖೆ ಪ್ರಕರಣ ದಾಖಲಿಸಿ ತನಿಖೆ ನಡೆಸಲಿದೆ ಎಂದು ತಿಳಿದುಬಂದಿದೆ. ಘಟನೆ ಬಗ್ಗೆ ಆಕ್ರೋಶವೂ ವ್ಯಕ್ತವಾಗಿದೆ.

Leave a Reply

error: Content is protected !!