ಬಿಜೆಪಿ ಕಾರ್ಯಕರ್ತನಿಂದ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿಯ ನಿಂದನೆ: ಬಂಧನ

ಶೇರ್ ಮಾಡಿ

ಸಾಮಾಜಿಕ ಜಾಲತಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಅವಾಚ್ಯವಾಗಿ ನಿಂದಿಸಿದ ಆರೋಪದಲ್ಲಿ ಬಿಜೆಪಿ ಕಾರ್ಯಕರ್ತನೊಬ್ಬನನ್ನು ಬಜ್ಪೆ ಠಾಣಾ ಪೊಲೀಸರು ಬಂಧಿಸಿದ್ದಾರೆ.

ಮುತ್ತೂರು ಗ್ರಾಮದ ಬೊಳಿಯ ನಿವಾಸಿ, ಬಿಜೆಪಿಯ ಸಕ್ರಿಯ ಕಾರ್ಯಕರ್ತ ಸಂತೋಷ್ ಪೂಜಾರಿ ಬಂಧಿತ ಆರೋಪಿ.

ಸಂತೋಷ್ ಪೂಜಾರಿ ಡಿ.11ರಂದು ‘ಶ್ರೀ ನಾರಾಯಣ ಗುರು ಯುವ ವೇದಿಕೆ’ ಎಂಬ ವಾಟ್ಸ್ ಆ್ಯಪ್ ಗ್ರೂಪ್ ನಲ್ಲಿ ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿಯನ್ನು ನಿಂದಿಸಿ ವಾಯ್ಸ್ ಮೆಸೇಜ್ ಹಾಕಿದ್ದನೆನ್ನಲಾಗಿದೆ. ಬಳಿಕ ಈ ವಾಯ್ಸ್ ಮೆಸೇಜ್ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ಕುರಿತು ಮುತ್ತೂರು ವಲಯ ಕಾಂಗ್ರೆಸ್ ಅಧ್ಯಕ್ಷ ಹರಿಯಪ್ಪ ಡಿ.14ರಂದು ಬಜ್ಪೆ ಫೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ದೂರು ಆಧರಿಸಿ ಸಂತೋಷ್ ಪೂಜಾರಿಯನ್ನು ವಶಕ್ಕೆ ಪಡೆದ ಪೊಲೀಸರು ವಿಚಾರಣೆ ನಡೆಸಿದ್ದಾರೆ. ಈ ವೇಳೆ ತಪ್ಪೊಪ್ಪಿಕೊಂಡಿದ್ದು, ಬಳಿಕ ಆತನನ್ನು ಬಂಧಿಸಿ ಮುಂದಿನ ಕ್ರಮ ಕೈಗೊಳ್ಳಲಾಗಿದೆ ಎಂದು ಬಜ್ಪೆ ಪೊಲೀಸರು ಮಾಹಿತಿ ನೀಡಿದ್ದಾರೆ.

Leave a Reply

error: Content is protected !!