ಗೋಳಿತಟ್ಟು ಸ.ಉ.ಹಿ.ಪ್ರಾ ಶಾಲೆಯಲ್ಲಿ ಪ್ರತಿಭೋತ್ಸವ -2023

ಶೇರ್ ಮಾಡಿ

ಗೋಳಿತಟ್ಟು ಸ.ಉ.ಹಿ.ಪ್ರಾ ಶಾಲೆಯಲ್ಲಿ ಪ್ರತಿಭೋತ್ಸವ -2023 ಡಿ.16ರಂದು ಆಚರಿಸಲಾಯಿತು.

ಪೂರ್ವಾಹ್ನ 10-30 ಗಂಟೆಗೆ ಗೋಳಿತಟ್ಟು ಗ್ರಾಮ ಪಂಚಾಯತಿನ ನಿಕಟ ಪೂರ್ವ ಅಧ್ಯಕ್ಷ ಜನಾರ್ದನ ಪ ಪಟೇರಿ ದೀಪ ಪ್ರಜ್ವಲನ ಮಾಡುವ ಮೂಲಕ ಪ್ರತಿಭೋತ್ಸವವನ್ನು ಉದ್ಘಾಟಿಸಿದರು.

ಗ್ರಾಮ ಪಂಚಾಯತಿನ ಉಪಾಧ್ಯಕ್ಷ ಬಾಬು ಪೂಜಾರಿ ಅಧ್ಯಕ್ಷತೆ ವಹಿಸಿ ಶಾಲೆಯ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಶಾಲಾ ವಿದ್ಯಾರ್ಥಿನಿಯರು ಪ್ರಾರ್ಥಿಸಿದರು. ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷ ಗೋಪಾಲ ಗೌಡ ಕುದ್ಕುಳಿ ಸರ್ವರನ್ನೂ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು.

ಮುಖ್ಯ ಶಿಕ್ಷಕಿ ಶ್ರೀಮತಿ ಜಯಂತಿ ಬಿ.ಎಂ ವಾರ್ಷಿಕ ವರದಿಯನ್ನು ವಾಚಿಸಿದರು. ಮುಖ್ಯ ಅತಿಥಿಗಳಾಗಿ ಅಬ್ದುಲ್ ಕುಂಞಿ, ಕುಶಾಲಪ್ಪ ಗೌಡ ಅನಿಲ, ಕೊರಗಪ್ಪ ಗೌಡ ಕಲ್ಲಡ್ಕ,ಹಸೀನಾಪರ್ವಿನ್ತಜ್, ಬೈಜು ವಿ ವಿ, ಉಪಸ್ಥಿತರಿದ್ದು ಶುಭ ಹಾರೈಸಿದರು.

ಪದವೀಧರ ಸಹ ಶಿಕ್ಷಕಿ ಶ್ರೀಮತಿ ಮನ್ವಿತ.ಡಿ.ಮತ್ತು ಗೌರವ ಶಿಕ್ಷಕಿ ಶ್ರೀಮತಿ ಯಶಸ್ವಿನಿ ಕೆ.ಜಿ. ಬಹುಮಾನದ ಪಟ್ಟಿಯನ್ನು ವಾಚಿಸಿದರು. ದೈಹಿಕ ಶಿಕ್ಷಣ ಶಿಕ್ಷಕ ಜೋನ್ ಕೆ.ಪಿ. ಕಾರ್ಯಕ್ರಮದ ವ್ಯವಸ್ಥೆ ಮಾಡಿದರು. ಪದವೀಧರ ಸಹ ಶಿಕ್ಷಕ ಅಬ್ದುಲ್ ಲತೀಫ್.ಸಿ. ಕಾರ್ಯಕ್ರಮ ನಿರೂಪಿಸಿದರು.
ಅತಿಥಿಗಳ ಸಮ್ಮುಖದಲ್ಲಿ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಕ್ರೀಡಾ ಚಾಂಪಿಯನ್ ಕುಮಾರಿ ಆಯಿಷತ್ ತಸ್ರೀಫಾಳಿಗೆ ದಾನಿ ಸೂಫಿ ಇಬ್ರಾಹಿಂ ರೂ 5000 ನಗದು ಬಹುಮಾನ ನೀಡಿದರು.
ಸಭಾ ಕಾರ್ಯಕ್ರಮದ ಬಳಿಕ ಆಗಮಿಸಿದ ಎಲ್ಲರಿಗೂ ಭೋಜನ ವ್ಯವಸ್ಥೆ ಮಾಡಲಾಯಿತು. ನಂತರ ನೆರೆಯ ಅಂಗನವಾಡಿ ಮಕ್ಕಳಿಂದ ಮತ್ತು ಶಾಲೆಯ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು.
ಶಿಕ್ಷಕಿ ತೇಜಸ್ವಿ.ಕೆ ವಂದನಾರ್ಪಣೆ ಸಲ್ಲಿಸಿದರು.

Leave a Reply

error: Content is protected !!