
ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ ಮೆಲ್ಕಾರ್ ಬಂಟ್ವಾಳ ಇದರ ದ್ವಿತೀಯ ವಾರ್ಷಿಕೋತ್ಸವ ಪ್ರಯುಕ್ತ ಶ್ರೀ ಮಹಾಗಣಪತಿ ಕ್ಷೇತ್ರ ಸೌತಡ್ಕದಲ್ಲಿ ಉಪ್ಪಿನಂಗಡಿ ಶ್ರೀ ಕಾಳಿಕಾಂಬಾ ಯಕ್ಷಗಾನ ಕಲಾ ಸೇವಾ ಸಂಘದ 50ನೇ ವರ್ಷದ ನಿಮಿತ್ತ ಶ್ರೀ ಮಹಾಭಾರತ ಸರಣಿಯ ರಾಜಸೂಯಾಧ್ವರ ತಾಳಮದ್ದಳೆ ಜರಗಿತು.
ಭಾಗವತರಾಗಿ ಪದ್ಮನಾಭ ಕುಲಾಲ್ ಇಲಂತಿಲ, ಹಿಮ್ಮೇಳದಲ್ಲಿ ಮುರಳಿಧರ ಆಚಾರ್ಯ ನೇರೆಂಕಿ, ಶ್ರೀಪತಿ ಭಟ್ ಉಪ್ಪಿನಂಗಡಿ, ಅರ್ಥಧಾರಿಗಳಾಗಿ ಅಂಬಾಪ್ರಸಾದ ಪಾತಾಳ(ಧರ್ಮರಾಯ), ಗೋಪಾಲ ಶೆಟ್ಟಿ ಕಳೆಂಜ(ಮಾಗಧ), ದಿವಾಕರ ಆಚಾರ್ಯ ಗೇರುಕಟ್ಟೆ(ಶ್ರೀ ಕೃಷ್ಣ), ಹರೀಶ ಆಚಾರ್ಯ ಬಾರ್ಯ(ಭೀಮಸೇನ), ಶ್ರೀಮತಿ ಪುಷ್ಪಲತಾ ಎಂ(ಇಂದ್ರಸೇನ ಮತ್ತು ಅರ್ಜುನ) ಭಾಗವಹಿಸಿದ್ದರು.
ಹಿರಿಯರ ಸೇವಾ ಪ್ರತಿಷ್ಠಾನದ ಪದಾಧಿಕಾರಿಗಳು ಕಲಾವಿದರನ್ನು ಗೌರವಿಸಿದರು.
ಕಾರ್ಯಕ್ರಮದಲ್ಲಿ ಪ್ರತಿಷ್ಠಾನದ ಅಧ್ಯಕ್ಷ ಕೈಯೂರು ನಾರಾಯಣ ಭಟ್, ಕಲಾಪೋಷಕರಾದ ಬಿ.ಭುಜಬಲಿ ಧರ್ಮಸ್ಥಳ, ಜಯಾನಂದ ಪೆರಾಜೆ ಮೊದಲಾದವರು ಉಪಸ್ಥಿತರಿದ್ದರು. ಪ್ರತಿಷ್ಠಾನದ ಉಪಾಧ್ಯಕ್ಷರಾದ ದುಗ್ಗಪ್ಪ.ಯನ್ ಕಾರ್ಯಕ್ರಮ ನಿರೂಪಿಸಿದರು.



