ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಡಬ ತಾಲೂಕಿನ ನೆಲ್ಯಾಡಿಯಲ್ಲಿ ” ತಾಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿ “

ಶೇರ್ ಮಾಡಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಡಬ ತಾಲೂಕಿನ ನೆಲ್ಯಾಡಿಯಲ್ಲಿ ತಾಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿ ಇಂದು ಬೆಳಿಗ್ಗೆ ನಡೆಯಿತು ನಡೆಯಿತು.ಕಾರ್ಯಕ್ರಮದ ಉದ್ಘಾಟನೆಯನ್ನು ಶಾಸಕರಾದ ಭಾಗೀರಥಿ ಮುರುಳ್ಯ ನೆರವೇರಿಸಿದರು.ಸಭಾಧ್ಯಕ್ಷತೆಯನ್ನು ನೆಲ್ಯಾಡಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯರಾದ ಡಾ.ಶಿಶಿರ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಬೆಳ್ಳಾರೆ ರಕ್ಷಾ ಆಯುರ್ವೇದ ಆಸ್ಪತ್ರೆಯ ವೈದ್ಯರಾದ ಡಾ. ಜಯಶ್ರೀ , ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ದ.ಕ.ಜಿಲ್ಲೆಯ ನಿರ್ದೇಶಕರಾದ ಪ್ರವೀಣ್ ಕುಮಾರ್ ಮತ್ತು ನೆಲ್ಯಾಡಿ ಸಿ.ಎ ಬ್ಯಾಂಕ್ ನ ಕಾರ್ಯನಿರ್ವಾಹಣಾಧಿಕಾರಿ ಭಾಗವಹಿಸಿದ್ದರು.

ಕಡಬ ತಾಲೂಕು ಜನಜಾಗೃತಿ ವೇದಿಕೆಯ ಅಧ್ಯಕ್ಷರಾದ ಮಹೇಶ್ ಕೆ ಸವಣೂರು, ತಾಲೂಕು ಕೇಂದ್ರ ಒಕ್ಕೂಟ ಸಮಿತಿಯ ಅಧ್ಯಕ್ಷರಾದ ಸಂತೋಷ್ ಕೆ ,ಕಡಬ ತಾಲೂಕು ಯುವಜನ ಒಕ್ಕೂಟದ ಅಧ್ಯಕ್ಷರಾದ ಶಿವಪ್ರಸಾದ್ ಮೈಲೇರಿ, ನೆಲ್ಯಾಡಿ ವಲಯ ಜನಜಾಗೃತಿ ವೇದಿಕೆಯ ಅಧ್ಯಕ್ಷರಾದ ಜಯಾನಂದ ಬಂಟ್ರಿಯಾಳ್, ನೆಲ್ಯಾಡಿ ವಲಯ ಒಕ್ಕೂಟದ ಅಧ್ಯಕ್ಷರಾದ ಕುಶಾಲಪ್ಪ ಗೌಡ ಕಳಪ್ಪರು, ನೆಲ್ಯಾಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸಲಾಂ ಬಿಲಾಲ್ ಮೊದಲಾದವರು ಉಪಸ್ಥಿತರಿದ್ದರು.

“ಸಾಮಾಜಿಕ ಜಾಲತಾಣದಿಂದ ಮಕ್ಕಳ ಮೇಲೆ ಬೀರುವ ದುಷ್ಪರಿಣಾಮ ಮತ್ತು ಪರಿಹಾರೋಪಯ” ಕುರಿತು ವಿಚಾರ ಗೋಷ್ಠಿ ನಡೆಯಿತು.ಜ್ಞಾನ ವಿಕಾಸ ಕೇಂದ್ರದ ಸದಸ್ಯರಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.ತಾಲೂಕು ಜ್ಞಾನ ವಿಕಾಸ ಸಮನ್ವಯಾಧಿಕಾರಿ ಶ್ರೀಮತಿ ಚೇತನಾ ರವರು ವಿಚಾರಗೋಷ್ಠಿ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ನೆರವೇರಿಸಿದರು.

ತಾಲೂಕು ಯೋಜನಾಧಿಕಾರಿ ಮೇದಪ್ಪ ನಾವೂರು ಪ್ರಸ್ತಾಪಿಸಿ, ಸ್ವಾಗತಿಸಿದರು. ನೆಲ್ಯಾಡಿ ವಲಯದ ಮೇಲ್ವಿಚಾರಕ ವಿಜೇಶ್ ಜೈನ್ ವಂದಿಸಿ,ಕಡಬ ವಲಯದ ಮೇಲ್ವಿಚಾರಕ ರವಿಪ್ರಸಾದ್ ಕಾರ್ಯಕ್ರಮ ನಿರೂಪಿಸಿದರು.

ಶ್ರೀ ಕ್ಷೇತ್ರ ಧ. ಗ್ರಾ. ಯೋಜನೆ ಬಿ ಸಿ ಟ್ರಸ್ಟ್ (ರಿ) ಕಡಬ ತಾ. “ತಾಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿ”

Leave a Reply

error: Content is protected !!