ಹಿಂಜಾವೇ ಪುತ್ತೂರು ಜಿಲ್ಲಾ ಸಹಸಂಯೋಜಕ ದಿನೇಶ್‌ ಪಂಜಿಗರಿಗೆ ಗಡಿಪಾರು ನೊಟೀಸ್

ಶೇರ್ ಮಾಡಿ

ಪುತ್ತೂರು: ಹಿಂದು ಜಾಗರಣ ವೇದಿಕೆ ಪುತ್ತೂರು ಜಿಲ್ಲಾ ಸಹಸಂಯೋಜಕ ದಿನೇಶ್‌ ಪಂಜಿಗ ಅವರ ವಿರುದ್ಧ ಕರ್ನಾಟಕ ಪೊಲೀಸ್‌ ಕಾಯ್ದೆ ಕಲಂ 55ರಂತೆ ವಿಜಯಪುರ ಜಿಲ್ಲೆಯ ಸಿಂಧಗಿ ಪೊಲೀಸ್‌ ಠಾಣಾ ವ್ಯಾಪ್ತಿಗೆ ಯಾಕೆ ಗಡಿಪಾರು ಮಾಡಬಾರದು ಎಂದು ಕಾರಣ ಕೇಳುವ ಆದೇಶ ಮಾಡಿ ಉಪವಿಭಾಗೀಯ ದಂಡಾಧಿಕಾರಿ ನೊಟೀಸ್‌ ಜಾರಿ ಮಾಡಿದ್ದಾರೆ.

ಪುತ್ತೂರು ತಾಲೂಕಿನ ಪುತ್ತೂರು ನಗರ ಪೊಲೀಸ್‌ ಠಾಣಾ ವ್ಯಾಪ್ತಿಯ ಶಾಂತಿಗೋಡು ಗ್ರಾಮದ ಪಂಜಿಗ ಮನೆ ಎಂಬಲ್ಲಿನ ದಿನೇಶ್‌ (37.ವ)ರವರು ಪುತ್ತೂರು ನಗರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ವಿನಾಕಾರಣ ಕ್ಷುಲ್ಲಕ ವಿಚಾರಗಳಿಗೆ ತನ್ನ ಸಹಚರರೊಂದಿಗೆ ತಕರಾರು ನಡೆಸಿ ದೊಂಬಿ, ಹಲ್ಲೆ ನಡೆಸುತ್ತಾ ಜನರಿಗೆ ಬೆದರಿಕೆ ಹಾಕಿರುವ ಪ್ರಕರಣದ ಆರೋಪಿಯಾಗಿದ್ದಾರೆ. ಈತನ ವಿರುದ್ಧ ಪುತ್ತೂರು ನಗರ ಪೊಲೀಸ್‌ ಠಾಣೆಯಲ್ಲಿ ರೌಡಿ ಹಾಳೆಯನ್ನು ಕೂಡ ತೆರೆಯಲಾಗಿದ್ದು ಇತರ ಆಪಾದನೆಗಳ ಪ್ರಕರಣಗಳಿಗೆ ಸಂಬಂಧಿಸಿ ಗಡಿಪಾರು ಮಾಡುವ ಕುರಿತು ಪುತ್ತೂರು ನಗರ ಪೊಲೀಸ್‌ ಠಾಣೆ ಮತ್ತು ಪುತ್ತೂರು ಉಪಾಅಧೀಕ್ಷಕರು ನೀಡಿದ ವರದಿಯಂತೆ ಉಪವಿಭಾಗದ ದಂಡಾಧಿಕಾರಿಯೂ ಆಗಿರುವ ಸಹಾಯಕ ಆಯುಕ್ತರು, ನಿಮ್ಮನ್ನು ಯಾಕೆ ಗಡಿಪಾರು ಮಾಡಬಾರದು ಎಂದು ದಿನೇಶ್‌ ಪಂಜಿಗ ಅವರಿಗೆ ಕಾರಣ ಕೇಳುವ ನೊಟೀಸ್‌ ಜಾರಿ ಮಾಡಿದ್ದು ಡಿ.20ರಂದು ನ್ಯಾಯಾಲಯಕ್ಕೆ ಖುದ್ದು ಹಾಜರಾಗಿ ಅಥವಾ ವಕೀಲರ ಮೂಲಕ ಲಿಖಿತ ವಿವರಣೆ ನೀಡಬೇಕು. ಇಲ್ಲವಾದಲ್ಲಿ ಏಕಪಕ್ಷೀಯ ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ವಿಶೇಷ ಆಕರ್ಷಣೆಯಾಗಿ ತಾರಾಲಯ

ಕಾರ್ಯಕ್ರಮದ ವಿಶೇಷ ಆಕರ್ಷಣೆಯಾಗಿ ಪ್ಲಾನೆಟೋರಿಯಂ ಇರಲಿದೆ. ಅಲ್ಲದೇ ವಿವಿಧ ವಸ್ತು ಪ್ರದರ್ಶನಗಳೂ ಇರಲಿದ್ದು ಎರಡು ದಿನ ಕಲೆ, ಜೀವನ ಕೌಶಲ್ಯ, ವಿಜ್ಞಾನ ಮತ್ತು ಸಂಸ್ಕೃತಿಯ ಪ್ರದರ್ಶನ ಆಗಲಿದೆ ಎಂದು ಪ್ರಕಟಣೆ ತಿಳಿಸಿದೆ.

Leave a Reply

error: Content is protected !!