ಲಾರಿ, ಜೀಪ್ ಡಿಕ್ಕಿ- ಸ್ಥಳದಲ್ಲೇ ನಾಲ್ವರ ದುರ್ಮರಣ

ಶೇರ್ ಮಾಡಿ

ಅಫಜಲಪುರ-ಕಲಬುರಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ನಾಲ್ವರು ಸ್ಥಳದಲ್ಲಿಯೇ ದಾರುಣವಾಗಿ ಮೃತಪಟ್ಟ ಘಟನೆ ನಡೆದಿದೆ.

ಲಾರಿ ಹಾಗೂ ಜೀಪ್‌ ನಡುವೆ ನಡೆದ ಅಪಘಾತದಲ್ಲಿ ಸಂತೋಷ್ (40), ಶಂಕರ್ (55), ಸಿದ್ದಮ್ಮ (50), ಹುಚ್ಚಪ್ಪ (05) ಮೃತಪಟ್ಟಿದ್ದಾರೆ. ಘಟನೆಯಲ್ಲಿ ಗಂಭೀರ ಗಾಯಗೊಂಡಿರುವ ಪೂಜಾ ಕಲಬುರಗಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ.

ಮೃತರೆಲ್ಲರೂ ಅಫಜಲಪುರ ಮಾಡ್ಯಾಳ ಗ್ರಾಮದ ನಿವಾಸಿಗಳಾಗಿದ್ದಾರೆ. ಇವರು ಅಫಜಲಪುರ ಕಡೆಯಿಂದ ಮಲ್ಲಾಬಾದ್ ಕಡೆ ಜೀಪ್‍ನಲ್ಲಿ ಹೊರಟಿದ್ದರು. ಇತ್ತ ಕಲಬುರಗಿ ಕಡೆಯಿದ ಹೊರಟಿದ್ದ ಲಾರಿಗೆ ಈ ಜೀಪ್ ಡಿಕ್ಕಿ ಹೊಡೆದಿದ್ದು, ಸಂಪೂರ್ಣ ನಜ್ಜುಗುಜ್ಜಾಗಿದೆ. ಸ್ಥಳಕ್ಕೆ ಅಫಜಲಪುರ ಪೊಲೀಸರು ಭೇಟಿ ನೀಡಿ ಪರೀಶೀಲನೆ ನಡೆಸಿದ್ದಾರೆ.

Leave a Reply

error: Content is protected !!