ಪ್ರಥಮ ಪಿಯುಸಿ ವಿದ್ಯಾರ್ಥಿ ಹೃದಯಾಘಾತದಿಂದ ಸಾವು

ಶೇರ್ ಮಾಡಿ

ಪ್ರಥಮ ಪಿಯುಸಿ ವಿದ್ಯಾರ್ಥಿ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಉಡುಪಿಯಲ್ಲಿ ನಡೆದಿದೆ.

ಅಫ್ಕಾರ್ (17) ಮೃತಪಟ್ಟ ವಿದ್ಯಾರ್ಥಿ. ಈತ ಉಡುಪಿ ಕಲ್ಯಾಣಪುರ ಮಿಲಾಗ್ರಿಸ್ ಪಿಯು ಕಾಲೇಜು ವಿದ್ಯಾರ್ಥಿಯಾಗಿದ್ದಾನೆ.

ಅಫ್ಕಾರ್, ಹುಟ್ಟಿನಿಂದ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದನು. ಅಂತೆಯೇ ಡಿ.6 ರಂದು ನಾರಾಯಣ ಹೃದಯಾಲಯದಲ್ಲಿ ಚಿಕಿತ್ಸೆ ಪಡೆದಿದ್ದ. ಡಿ.18 ರಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದ ಮನೆಗೆ ಮರಳಿದ್ದ.

ಊರಿಗೆ ಹಿಂದಿರುಗಿದ ಸಂದರ್ಭ ಆರೋಗ್ಯದಲ್ಲಿ ಏರುಪೇರು ಕಾಣಿಸಿಕೊಂಡಿದೆ. ಹೀಗಾಗಿ ಮತ್ತೆ ಆಸ್ಪತ್ರೆಗೆ ಸಾಗಿಸುವ ವೇಳೆಯಲ್ಲಿ ಅಫ್ಕಾರ್ ಮೃತಪಟ್ಟಿದ್ದಾನೆ.

Leave a Reply

error: Content is protected !!