ಗ್ಯಾಸ್ ಗೀಸರ್‌ಗೆ ಬೆಂಗಳೂರಿನಲ್ಲಿ ಮತ್ತೊಂದು ಬಲಿಯಾಗಿದ್ದು, ವಿಷಾನಿಲ ಸೋರಿಕೆಯಾಗಿ ಸ್ನಾನ ಮಾಡಲು ಹೋಗಿದ್ದ ಯುವತಿ ಸಾವನ್ನಪ್ಪಿದ ಘಟನೆ ಕಾಮಾಕ್ಷಿಪಾಳ್ಯದ ಮೀನಾಕ್ಷಿನಗರದಲ್ಲಿ ನಡೆದಿದೆ.
ರಾಜೇಶ್ವರಿ (23) ಮೃತ ಯುವತಿ. ರಾಜೇಶ್ವರಿ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದಳು. ಅಣ್ಣನ ವಿವಾಹದ ಹಿನ್ನೆಲೆ ರಜೆ ಹಾಕಿ ಮನೆಯಲ್ಲಿದ್ದಳು. ಸ್ನಾನ ಮಾಡಲು ಹೋಗಿದ್ದ ವೇಳೆ ಅವಘಡ ಸಂಭವಿಸಿದೆ.
ಗ್ಯಾಸ್ ಗೀಸರ್‌ನಿಂದ ವಿಷಾನಿಲ ಸೋರಿಕೆಯಾದ ಹಿನ್ನೆಲೆ ಯುವತಿ ಅಲ್ಲೇ ಪ್ರಜ್ಞೆತಪ್ಪಿ ಬಿದ್ದಿದ್ದಾಳೆ. ಕೂಡಲೇ ಆಕೆಯನ್ನು ಕುಟುಂಬಸ್ಥರು ಆಸ್ಪತ್ರೆಗೆ ದಾಖಲಿಸಿದ್ದರೂ, ಚಿಕಿತ್ಸೆ ಫಲಿಸದೇ ಯುವತಿ ಕೊನೆಯುಸಿರೆಳೆದಿದ್ದಾಳೆ. ಈ ಕುರಿತು ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.