ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ದೂರು

ಶೇರ್ ಮಾಡಿ

ವಿಮೆನ್ ಇಂಡಿಯಾ ಮೂವ್‌ಮೆಂಟ್ (ವಿಮ್) ಬೆಳ್ತಂಗಡಿ ಘಟಕದ ವತಿಯಿಂದ, ಮುಸ್ಲಿಂ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಆರ್‌ಎಸ್‌ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ನೀಡಲಾಯಿತು.

ಕಲ್ಲಡ್ಕ ಪ್ರಭಾಕರ ಭಟ್ ಅವರು ಮಂಡ್ಯದಲ್ಲಿ ನಡೆದ ಸಮಾವೇಶದಲ್ಲಿ ಮುಸ್ಲಿಂ ಮಹಿಳೆಯರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ಮುಸ್ಲಿಮರ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟುಮಾಡಿದ್ದಾರೆ. ಅವರ ವಿರುದ್ಧ ಪ್ರಕರಣ ದಾಖಲಿಸಿ, ಕಾನೂನು ಕ್ರಮ ಕೈಗೊಳ್ಳಬೇಕು ಎಂದು ದೂರಿನಲ್ಲಿ ಆಗ್ರಹಿಸಲಾಗಿದೆ.

ವಿಮೆನ್ ಇಂಡಿಯಾ ಮೂವ್ಮೆಂಟ್ (ವಿಮ್) ಬೆಳ್ತಂಗಡಿ ಘಟಕ ಅಧ್ಯಕ್ಷೆ ಶಮಾ ಆಲಿ ಉಜಿರೆ, ಕಾರ್ಯದರ್ಶಿ ನಸೀಮಾ ಬೆಳ್ತಂಗಡಿ, ಕೋಶಾಧಿಕಾರಿ ಹಸೀನಾ ಬೆಳ್ತಂಗಡಿ, ಸದಸ್ಯರಾದ ವಕೀಲೆ ಅಸ್ಮಾ ಮತ್ತು ಸೌದಾ ಬೆಳ್ತಂಗಡಿ ಇದ್ದರು.

Leave a Reply

error: Content is protected !!