ಉದನೆ: ಇಲ್ಲಿನ ಸೈಂಟ್ ಆಂಟನೀಸ್ ಹೈಸ್ಕೂಲ್ ಹಾಗೂ ಬಿಷಪ್ ಪೋಳಿಕಾರ್ಪೋಸ್ ಪಬ್ಲಿಕ್ ಸ್ಕೂಲ್ ಇದರ ವಾರ್ಷಿಕ ಕ್ರೀಡಾಕೂಟ ಹಾಗೂ ಪ್ರತಿಭಾ ದಿನೋತ್ಸವ ನಡೆಯಿತು. ಸರಕಾರಿ ಪ್ರಥಮ ದರ್ಜೆ ಕಾಲೇಜು ಉಪ್ಪಿನಂಗಡಿ ಇಲ್ಲಿನ ದೈಹಿಕ ಶಿಕ್ಷಣ ನಿರ್ದೇಶಕರಾದ ಶ್ರೀ ಪ್ರವೀಣ್ ಕುಮಾರ್ ಪುತ್ತೂರು ಕ್ರೀಡಾಕೂಟವನ್ನು ಉದ್ಘಾಟಿಸಿ ,ಉದ್ಘಾಟನಾ ಭಾಷಣ ಮಾಡಿದರು.ಸಂಸ್ಥೆಯ ಸಂಚಾಲಕರಾದ ರೆ.ಫಾ ಹನಿ ಜೇಕಬ್ ಕ್ರೀಡಾ ಧ್ವಜಾರೋಹಣಗೈದರು.ಕ್ರೀಡಾ ಪಟುಗಳು ಪಥ ಸಂಚಲನ ನಡೆಸಿ ಅತಿಥಿಗಳಿಗೆ ಗೌರವ ವಂದನೆ ಸಲ್ಲಿಸಿದರು.
ಪ್ರತಿಭಾ ದಿನೋತ್ಸವ, ಕ್ರಿಸ್ಮಸ್ ಆಚರಣೆ ಕಾರ್ಯಕ್ರಮದಲ್ಲಿ, ಸಂಸ್ಥೆಯ ಸಂಚಾಲಕರಾದ ರೆ.ಫಾ ಹನಿ ಜೇಕಬ್ ಪ್ರಾಸ್ತಾವಿಕ ಮಾತುಗಳನ್ನಾಗಿ ಎಲ್ಲರನ್ನು ಸ್ವಾಗತಿಸಿದರು. ಪರಮ ಪೂಜ್ಯ ಬಿಷಪ್ ಯಾಕೋಬ್ ಮಾರ್ ಅಂಥೋನೀಸ್, ನಿರ್ದೇಶಕರು ಸೈಂಟ್ ಆಂಟನೀಸ್ ಎಜುಕೇಶನ್ ಸೊಸೈಟಿ ಹೊನ್ನಾವರ,ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕನ್ನಡ ಮಾಧ್ಯಮ ಪ್ರೌಢ ಶಾಲಾ ಮುಖ್ಯಗುರುಗಳಾದ ಶ್ರೀಧರ ಗೌಡ, ಬಿಷಪ್ ಪೋಳಿಕಾರ್ಪೋಸ್ ಪಬ್ಲಿಕ್ ಶಾಲೆಯ ಪ್ರಭಾರ ಮುಖ್ಯ ಗುರು ಯಶೋಧರ ವರದಿ ವಾಚಿಸಿದರು.ಮುಖ್ಯ ಅತಿಥಿಯಾಗಿ ಶ್ರೀ ಶಾಂತಾರಾಮ ಓಡ್ಲ,ಸಹಶಿಕ್ಷಕರು,ಸರಕಾರಿ ಪೌಢ ಶಾಲೆ ಕೊಣಾಲು,&ಅಧ್ಯಕ್ಷರು,ಸಹಶಿಕ್ಷಕರ ಸಂಘ ಕಡಬ ಉಪಸ್ಥಿತರಿದ್ದರು.
ರೆ.ಫಾ ಜೋಸೆಫ್ ಪಾಂಬಕ್ಕಲ್, ವಿಕಾರ್, ಸಂತ ಜೋಸೇಫರ ದೇವಾಲಯ ಅಡ್ಡಹೊಳೆ, ಕ್ರಿಸ್ಮಸ್ ಸಂದೇಶ ನೀಡಿದರು.
2022-23 ಎಸ್.ಎಸ್ .ಎಲ್ ಸಿ ಪರೀಕ್ಷೆಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳನ್ನು ಇದೇ ಸಂದರ್ಭದಲ್ಲಿ ಗೌರವಿಸಲಾಯಿತು. ವೇದಿಕೆಯಲ್ಲಿ ಕಾರ್ತಿಕೇಯನ್ ಅಧ್ಯಕ್ಷರು ಗ್ರಾಮ ಪಂಚಾಯತ್ ಶಿರಾಡಿ, ಎರಡೂ ವಿಭಾಗದ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷರುಗಳಾದ ಜಯಪ್ರಕಾಶ್ ಹಾಗೂಮೇಹಿ ಜಾರ್ಜ್, ಕೋಶಾಧಿಕಾರಿ ಸತೀಶ್ ಗೌಡ , ಪೂರ್ವ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಜಿಮ್ಸನ್ ಕೆ.ಜೆ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ, ಪೂರ್ವ ವಿದ್ಯಾರ್ಥಿಗಳಿಗೆ, ಪೋಷಕರಿಗೆ ಬಹುಮಾನ ವಿತರಿಸಲಾಯಿತು .ಬಳಿಕ ವಿದ್ಯಾರ್ಥಿಗಳಿಂದ ಕ್ರಿಸ್ತನ ಜನನ, ಸಂದೇಶವನ್ನು ಸಾರುವ ನೃತ್ಯ ಪ್ರದರ್ಶನ ನಡೆಯಿತು. ಶಿಕ್ಷಕ ಶಿಕ್ಷಕೇತರ ವೃಂದ, ಪೋಷಕರು, ಪೂರ್ವ ವಿದ್ಯಾರ್ಥಿಗಳು, ಊರವರು ಉಪಸ್ಥಿತರಿದ್ದರು.
ಹಿರಿಯ ಶಿಕ್ಷಕರಾದ ಬಾಲಕೃಷ್ಣ ಗೌಡ ಎಲ್ಲರನ್ನು ವಂದಿಸಿದರು. ಶಿಕ್ಷಕಿಯರಾದ ಶ್ರೀಮತಿ ಎಲಿಝಬೆತ್ ಹಾಗೂ ಶ್ರೀಮತಿ ನಯನ ಕಾರ್ಯಕ್ರಮ ನಿರೂಪಿಸಿದರು.