ಕಲ್ಲಡ್ಕ ಪ್ರಭಾಕರ್‌ ಭಟ್‌ ವಿರುದ್ಧ ಜಾಮೀನು ರಹಿತ ಕೇಸು ದಾಖಲು-ಹೈಕೋರ್ಟ್‌ ಮೊರೆಹೋದ ಪ್ರಭಾಕರ್‌ ಭಟ್‌- ಹೈಕೋರ್ಟ್ ಮಧ್ಯಂತರ ಜಾಮೀನು ಮಂಜೂರು

ಶೇರ್ ಮಾಡಿ

ಮುಸ್ಲಿಂ ಮಹಿಳೆಯರ ಬಗ್ಗೆ ತುಚ್ಚವಾಗಿ ಮಾತನಾಡಿದ್ದ ಕಲ್ಲಡ್ಕ ಪ್ರಭಾಕರ್‌ ಭಟ್‌ ಅವರಿಗೆ ರಾಜ್ಯ ಹೈಕೋರ್ಟ್‌ ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.

ಮುಸ್ಲಿಂ ಮಹಿಳೆಯರನ್ನು ನಿಂದಿಸುವ ಹಾಗೂ ಸೌಹಾರ್ದತೆಗೆ ಭಂಗ ಉಂಟುಮಾಡುವ ಪ್ರಚೋದನಾಕಾರಿ ಹೇಳಿಕೆ ನೀಡಿದ್ದ ಕಲ್ಲಡ್ಕ ಡಾ.ಪ್ರಭಾಕರ್‌ ಭಟ್‌ ವಿರುದ್ಧ ಹಲವೆಡೆ ದೂರು ನೀಡಲಾಗಿದ್ದು ಬಂಧಿಸುವಂತೆ ಪ್ರತಿಭಟನೆ ನಡೆಸಿ ಆಗ್ರಹಿಸಲಾಗಿತ್ತು. ನಜ್ಮಾ ನಝೀರ್‌ ನೀಡಿದ ದೂರಿನ ಮೇರೆಗೆ ಶ್ರೀರಂಗಪಟ್ಟಣ ಪೊಲೀಸ್‌ ಠಾಣೆಯಲ್ಲಿ ಪ್ರಭಾಕರ್‌ ಭಟ್‌ ವಿರುದ್ದ ದೂರು ದಾಖಲಾಗಿತ್ತು. ಜಾಮೀನು ರಹಿತ ಪ್ರಕರಣ ದಾಖಲಾದ ಹಿನ್ನೆಲೆಯಲ್ಲಿ ಡಾ.ಕಲ್ಲಡ್ಕ ಪ್ರಭಾಕರ ಭಟ್‌ ಜಾಮೀನಿಗಾಗಿ ಹೈಕೋರ್ಟ್‌ ಮೊರೆಹೋಗಿದ್ದರು.

ಅರ್ಜಿ ವಿಚಾರಣೆ ನಡೆಸಿದ ರಾಜ್ಯ ಹೈಕೋರ್ಟ್ ಡಾ.ಭಟ್‌ ಅವರಿಗೆ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಜಾಮೀನು ನೀಡುವಂತೆ ಹೈಕೋರ್ಟಿನಲ್ಲಿ ಖ್ಯಾತ ನ್ಯಾಯವಾದಿ ಅರುಣ್‌ ಶ್ಯಾಮ್‌ ವಾದಿಸಿದ್ದರು.

Leave a Reply

error: Content is protected !!