ಪೇಂಟಿಂಗ್‌ ಕೆಲಸ ಮಾಡುತ್ತಿದ್ದಾಗಲೇ ಯುವಕ ಹೃದಯಾಘಾತದಿಂದ ಮೃತ್ಯು!

ಶೇರ್ ಮಾಡಿ

ಇತ್ತೀಚೆಗೆ ಕರ್ನಾಟಕ ಸೇರಿದಂತೆ ದೇಶಾದ್ಯಂತ ಹೃದಯಾಘಾತ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಲೇ ಇದ್ದು, ಇತ್ತೀಚೆಗೆ ಪೇಂಟಿಂಗ್‌ ಮಾಡುತ್ತಿದ್ದ ಯುವಕನೊಬ್ಬ ದಿಢೀರನೆ ಹೃದಯಾಘಾತಕ್ಕೊಳಗಾಗಿ ಕೊನೆಯುಸಿರೆಳೆದಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದ್ದು, ಈ ಘಟನೆ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ಮೃತ ಯುವಕನನ್ನು ಪೇಂಟರ್‌ ಆಶಿಶ್‌ ಎಂದು ಗುರುತಿಸಲಾಗಿದೆ. ವರದಿಯ ಪ್ರಕಾರ, ಇಂದೋರ್‌ ನಲ್ಲಿ ಆಶಿಶ್‌ ಪೇಂಟಿಂಗ್‌ ಕೆಲಸ ಮಾಡುತ್ತಿದ್ದ ವೇಳೆ ಸುಸ್ತು ಕಾಣಿಸಿಕೊಂಡಿತ್ತು. ನಂತರ ಮುಖತೊಳೆದುಕೊಂಡು ಬಂದು, ಪೇಂಟ್‌ ಬಕೆಟ್‌ ಮೇಲೆ ಕುಳಿತು ವಿಶ್ರಾಂತಿ ಪಡೆಯುತ್ತಿದ್ದ. ಆದರೆ ಸ್ವಲ್ಪ ಹೊತ್ತಿನಲ್ಲೇ ಹೃದಯಾಘಾತಕ್ಕೊಳಗಾಗಿ ಕುಸಿದು ಬಿದ್ದಿರುವ ದೃಶ್ಯ ಸಿಸಿಟಿವಿಯಲ್ಲಿದೆ.

ಈ ಸಂದರ್ಭದಲ್ಲಿ ಕೆಲಸ ಮಾಡುತ್ತಿದ್ದ ಇಬ್ಬರು ತಕ್ಷಣವೇ ಓಡಿಬಂದು ನೆರವಿಗಾಗಿ ಬೊಬ್ಬೆ ಹೊಡೆಯುತ್ತಿದ್ದು, ಒಬ್ಬಾತ ಆಶಿಶ್‌ ನ ಕೈಯನ್ನು ತಿಕ್ಕಿ ಉಸಿರಾಡುವಂತೆ ಮಾಡಲು ಪ್ರಯತ್ನಿಸುತ್ತಿದ್ದ. ಆದರೆ ಪರಿಸ್ಥಿತಿ ಕೈಮೀರಿ ಹೋಗಿದ್ದು, ಆಶಿಶ್‌ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದ.

Leave a Reply

error: Content is protected !!