ಪಡುಬೆಟ್ಟು ಸರ್ಕಾರಿ ಶಾಲೆಯಲ್ಲಿ ರಾಷ್ಟ್ರೀಯ ವಿದ್ಯುತ್ ಸುರಕ್ಷತಾ ಸಪ್ತಾಹ ಕಾರ್ಯಕ್ರಮ

ಶೇರ್ ಮಾಡಿ

ನೆಲ್ಯಾಡಿ: ರಾಷ್ಟ್ರೀಯ ವಿದ್ಯುತ್ ಸುರಕ್ಷತಾ ಸಪ್ತಾಹ – 2023ರ ಅಂಗವಾಗಿ ಕಡಬ ಮೆಸ್ಕಾಂ ಉಪವಿಭಾಗದ ವತಿಯಿಂದ ಪಡುಬೆಟ್ಟು ಸರ್ಕಾರಿ ಪ್ರೌಢಶಾಲೆಯಲ್ಲಿ ವಿದ್ಯುತ್ ಸುರಕ್ಷತೆ ಬಗ್ಗೆ ಜಾಗೃತಿ ಕಾರ್ಯಕ್ರಮ ನಡೆಯಿತು.

ನೆಲ್ಯಾಡಿ ಮೆಸ್ಕಾಂ ಶಾಖಾ ಜೆ.ಇ ರಮೇಶ್ ಕುಮಾರ್ ಹಾಗೂ ಸಿಬ್ಬಂದಿಗಳು ವಿದ್ಯುತ್ ಸುರಕ್ಷತೆ ಹಾಗೂ ವಿದ್ಯುತ್ ಅಪಘಾತ ತಡೆಗಟ್ಟುವ ಕುರಿತಂತೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಮಾಹಿತಿ ನೀಡಿದರು.

ಪ್ರೌಢಶಾಲೆ ಮುಖ್ಯಶಿಕ್ಷಕಿ ಕಮಲ, ಪವರ್ ಮ್ಯಾನ್ ಗಳಾದ ಅಬ್ದುಲ್ಲ, ವಿಠಲ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕಾರ್ಯಾಗಾರದಲ್ಲಿ ವಿದ್ಯಾರ್ಥಿಗಳು, ಶಿಕ್ಷಕರು ಉಪಸ್ಥಿತರಿದ್ದರು.

Leave a Reply

error: Content is protected !!