ಶಿಕ್ಷಣ ಇಲಾಖೆಯಲ್ಲಿ ಕೆಲಸದ ಒತ್ತಡ – ಕಚೇರಿಯಲ್ಲೇ ನೇಣು ಬಿಗಿದುಕೊಂಡು ಸರ್ಕಾರಿ ನೌಕರ ಆತ್ಮಹತ್ಯೆ

ಶೇರ್ ಮಾಡಿ

ಬಿಇಓ ಕಚೇರಿಯ ವ್ಯವಸ್ಥಾಪಕ ಅಧಿಕಾರಿ ಕಚೇರಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನಲ್ಲಿ ನಡೆದಿದೆ.

ಕಡೂರು ತಾಲೂಕು ಮೂಲದ ನಿಂಗನಾಯಕ (57) ಕಚೇರಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ವ್ಯವಸ್ಥಾಪಕ. ಸೋಮವಾರ (ಜ.1) ಬೆಳಿಗ್ಗೆ ಬಿಇಓ ಕಚೇರಿಯಲ್ಲೇ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕಳೆದ ಎರಡು ವರ್ಷಗಳಿಂದ ಇಲ್ಲಿ ಕೆಲಸ ಮಾಡುತ್ತಿದ್ದ ನಿಂಗನಾಯಕ ಕೆಲಸದ ಒತ್ತಡದ ಕಾರಣದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಸೋಮವಾರ ಬೆಳಗ್ಗೆ ಮನೆಗೆ ಹಾಲು ತಂದುಕೊಟ್ಟ ನಿಂಗನಾಯಕ ಮನೆಯಲ್ಲಿ ವಾಕಿಂಗ್‌ ಹೋಗಿ ಬರ್ತೀನಿ ಅಂತ ಕಚೇರಿ ಕೀ ತೆಗೆದುಕೊಂಡು ಹೋಗಿದ್ದರು. ಅಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಶಿಕ್ಷಣ ಇಲಾಖೆಯಲ್ಲಿ ಕೆಲಸದ ಒತ್ತಡ ಅಧಿಕವಾಗಿತ್ತು. ಡಿ-ಗ್ರೂಪ್‌ ನೌಕರರು ಕಡಿಮೆ ಇದ್ದರು. ಇದರಿಂದ ಕೆಲಸಗಳು ಆಗದೇ ಭಾನುವಾರವೂ ಕೆಲಸ ಮಾಡುವ ಪರಿಸ್ಥಿತಿ ಇತ್ತು. ಭಾನುವಾರ (ಡಿ.31) ಸಹ ಕಚೇರಿಗೆ ಹೋಗಿ ಕೆಲಸ ಮಾಡಿದ್ದರು. ಆದರೂ ಎಲ್ಲಾ ಕೆಲಸ ಸಮಯಕ್ಕೆ ಸರಿಯಾಗಿ ನಿರ್ವಹಿಸಲು ಸಾಧ್ಯವಾಗುತ್ತಿರಲಿಲ್ಲ. ಇದರಿಂದ ಮನೆಯಲ್ಲಿ ನಿದ್ರೆ ಬರುತ್ತಿರಲಿಲ್ಲ ಎಂದು ಡೆತ್‌ನೋಟ್‌ನಲ್ಲಿ ಬರೆದಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಈ ಸಂಬಂಧ ಮೂಡಿಗೆರೆ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Leave a Reply

error: Content is protected !!