ಕಡಬ: ಸುಳ್ಯ ವಿಧಾನಸಭಾ ಕ್ಷೇತ್ರದ ಬಗರ್ ಹುಕುಂ ಸಾಗುವಳಿ ಸಕ್ರಮೀಕರಣಕ್ಕೆ(ಅಕ್ರಮ ಸಕ್ರಮ) ಅಧ್ಯಕ್ಷರಾಗಿ ಶಾಸಕಿ ಭಾಗೀರಥಿ ಮುರುಳ್ಯ, ಸದಸ್ಯರಾಗಿ ಪಿ.ಪಿ.ವರ್ಗೀಸ್, ಹೆಚ್.ಆದಂ, ಗೀತಾ ಕೋಲ್ಚಾರು ನೇಮಕ ಮಾಡಿ ಆದೇಶ ಹೊರಡಿಸಿದೆ.
ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರ ಅಧ್ಯಕ್ಷತೆಯ ಸಮಿತಿಗೆ ಜಿ.ಪಂ.ಮಾಜಿ ಸದಸ್ಯ, ಕಡಬ ತಾಲೂಕಿನ ನೂಜಿಬಾಳ್ತಿಲ ಗ್ರಾಮದ ಪಿ.ಪಿ.ವರ್ಗೀಸ್, ಕಾಂಗ್ರೆಸ್ ಹಿರಿಯ ಮುಖಂಡ ಕಡಬ ತಾಲೂಕು ರಾಮಕುಂಜ ಗ್ರಾಮದ ಹೆಚ್.ಆದಂ, ಹಾಗೂ ಸುಳ್ಯ ಬ್ಲಾಕ್ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ, ಸುಳ್ಯ ತಾಲೂಕಿನ ಅಲೆಟ್ಟಿ ಗ್ರಾಮದ ಗೀತಾ ಕೋಲ್ಚಾರು ಅವರನ್ನು ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ. ತಹಶೀಲ್ದಾರ್ ಅವರು ಸಮಿತಿಯಲ್ಲಿ ಸದಸ್ಯ ಕಾರ್ಯದರ್ಶಿಯಾಗಿರುತ್ತಾರೆ. ಈ ಸಂಬಂಧ ಡಿ.18ರಂದು ರಾಜ್ಯ ಸರಕಾರದ ಕಂದಾಯ ಇಲಾಖೆ(ಭೂ ಮಂಜೂರಾತಿ-2) ಪೀಠಾಧಿಕಾರಿ ಮುತ್ತುರಾಜ್ ಎಂ.ಎನ್.ಅವರು ಆದೇಶ ಹೊರಡಿಸಿದ್ದಾರೆ.