
ರಾಜ್ಯ ಸರ್ಕಾರ ವಿದ್ಯುತ್ ಬಿಲ್ ಹಾಗೂ ನೀರಿನ ಬಿಲ್ ಹೆಚ್ಚಳ ಮಾಡಿದ ಬಳಿಕ ಪದವಿ ಶಿಕ್ಷಣ ಶುಲ್ಕವನ್ನು 10% ಹೆಚ್ಚಳಮಾಡಿ ಜನರಿಗೆ ಶಾಕ್ ನೀಡಿದೆ.
ವಿಶ್ವವಿದ್ಯಾಲಯಗಳು ಸಲ್ಲಿಸಿದ್ದ ಶುಲ್ಕ ಹೆಚ್ಚಳ ಪ್ರಸ್ತಾವನೆಗೆ ಉನ್ನತ ಶಿಕ್ಷಣ ಇಲಾಖೆ ಒಪ್ಪಿಗೆ ಕೊಟ್ಟಿದೆ. ಇದರಿಂದ ವಿಶ್ವವಿದ್ಯಾಲಯಗಳು ಹಾಗೂ ಪದವಿ ಕಾಲೇಜ್‍ಗಳ ಶಿಕ್ಷಣ ಶುಲ್ಕವನ್ನು 10% ಹೆಚ್ಚಿಸಲು ಸರ್ಕಾರದಿಂದ ಅನುಮತಿ ಸಿಕ್ಕಂತಾಗಿದೆ. ಪ್ರಸ್ತುತ ವರ್ಷದಿಂದಲೇ ಶುಲ್ಕ ಹೆಚ್ಚಳಕ್ಕೆ ಒಪ್ಪಿಗೆ ನೀಡಲಾಗಿದೆ.
ಬಿಜೆಪಿ (BJP) ಸರ್ಕಾರದ ಅವಧಿಯಲ್ಲಿ ಏಕರೂಪ ಶುಲ್ಕ ತಜ್ಞರ ಸಮಿತಿ ನೀಡಿದ್ದ ವರದಿಗೆ ಸಿಎಂ ಸಿದ್ದರಾಮಯ್ಯ ಸರ್ಕಾರ ಗ್ರೀನ್ ಸಿಗ್ನಲ್ ಕೊಟ್ಟಿದೆ.
ಯುವನಿಧಿಯಲ್ಲಿ ಕೊಡುತ್ತಿರುವ ಹಣ ಮತ್ತೊಂದು ರೀತಿಯಲ್ಲಿ ಸರ್ಕಾರ ವಾಪಸ್ ಪಡೆಯಲು ತೀರ್ಮಾನಿಸಿದಂತಿದೆ. ಇನ್ನು ಮುಂದೆ ರಾಜ್ಯದಲ್ಲಿ ಪದವಿ ಶಿಕ್ಷಣವೂ ದುಬಾರಿಯಾಗಲಿದೆ ಎಂಬ ಮಾತುಗಳು ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿವೆ.



