ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಕೋವಿಶೀಲ್ಡ್ ಹಾಗೂ ಕೋವ್ಯಾಕ್ಸಿನ್ ಲಸಿಕೆಯ 2ನೇ ಡೋಸ್ ಪಡೆದು 6 ತಿಂಗಳು ಅಥವಾ 26 ವಾರ ಪೂರೈಸಿದ 18 ವರ್ಷ ಮೇಲ್ಪಟ್ಟವರು, ಮುನ್ನೆಚ್ಚರಿಕೆ ಡೋಸ್ ಪಡೆಯದ 60 ವರ್ಷ ಮೇಲ್ಪಟ್ಟವರು, ಕಡಿಮೆ ರೋಗ ನಿರೋಧಕ ಶಕ್ತಿ ಉಳ್ಳವರು, ಆರೋಗ್ಯ ಕಾರ್ಯಕರ್ತರು ಕೋರ್ಬಿವ್ಯಾಕ್ಸ್ ಕೋವಿಡ್-19 ಲಸಿಕೆಯನ್ನು ಪಡೆಯಬಹುದಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾ ವೆನ್ಲಾಕ್ ಆಸ್ಪತ್ರೆ, ತಾಲೂಕು ಆಸ್ಪತ್ರೆ ಬಂಟ್ವಾಳ, ಬೆಳ್ತಂಗಡಿ, ಪುತ್ತೂರು ಹಾಗೂ ಸುಳ್ಯ ಇಲ್ಲಿ ಕೋರ್ಬಿವ್ಯಾಕ್ಸ್ ಕೋವಿಡ್-19 ಲಸಿಕೆಯನ್ನು ಪ್ರತೀ ಮಂಗಳವಾರ ಮತ್ತು ಶುಕ್ರವಾರ ಬೆಳಗ್ಗೆ 9.00 ರಿಂದ ಮಧ್ಯಾಹ್ನ 1.00 ಗಂಟೆಯವರೆಗೆ ನೀಡಲಾಗುತ್ತಿದೆ.
ಸಾರ್ವಜನಿಕರು
ಮೂಲಕ ನೋಂದಾಯಿಸುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ತಿಳಿಸಿದ್ದಾರೆ.