ಮಕ್ಕಳು ಹೂ ಕಿತ್ತರೆಂಬ ಕಾರಣಕ್ಕೆ ಅಂಗನವಾಡಿ ಸಹಾಯಕಿಯ ಮೂಗು ಕತ್ತರಿಸಿದ ಕಿರಾತಕ

ಶೇರ್ ಮಾಡಿ

ಮಕ್ಕಳು ಹೂ ಕಿತ್ತರೆಂಬ ಕಾರಣಕ್ಕೆ ಬೆಳಗಾವಿ ತಾಲೂಕಿನ ಬಸುರ್ತೆ ಗ್ರಾಮದಲ್ಲಿ ಅಂಗನವಾಡಿ ಸಹಾಯಕಿಯ ಮೂಗು ಕತ್ತರಿಸಿದ ಕಿರಾತಕನನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ.

ಬಸುರ್ತೆ ಗ್ರಾಮದ ಕಲ್ಯಾಣಿ ಜ್ಯೋತಿಬಾ ಮೋರೆ(44) ಎಂಬಾತನನ್ನು ಕಾಕತಿ ಪೊಲೀಸರು ಬಂಧಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಿದ್ದಾರೆ.

ಜನವರಿ 1ರಂದು ಅಂಗನವಾಡಿ ಮಕ್ಕಳು ಹೂ ಕಿತ್ತರ್ ಎಂಬ ಕಾರಣಕ್ಕೆ ಮನೆ ಮಾಲೀಕ ಅಂಗನವಾಡಿ ಸಹಾಯಕಿ ಸುಗಂಧಾ ಮೋರೆ ಜತೆಗೆ ಜಗಳವಾಡಿದ್ದನು. ಜಗಳ ವಿಕೋಪಕ್ಕೆ ತಿರುಗಿ ಅಂಗನವಾಡಿ ಸಹಾಯಕಿಯ ಮೂಗನ್ನು ಕುಡುಗೋಲಿನಿಂದ ಕತ್ತರಿಸಿದ್ದನು. ಕಾರ್ಯಪ್ರವೃತ್ತರಾದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

Leave a Reply

error: Content is protected !!