ವಿದ್ಯುತ್​ ಶಾಕ್​ ತಗುಲಿ ಲೈನ್ ಮ್ಯಾನ್​ ಮೃತ್ಯು

ಶೇರ್ ಮಾಡಿ

ಕಡಬ ತಾಲೂಕಿನ ಸುಬ್ರಹ್ಮಣ್ಯ ಸಮೀಪದ ಪಂಜ ಸೆಕ್ಷನ್‌ನ ಬಳ್ಪದ ಪಾದೆ ಎಂಬಲ್ಲಿ ವಿದ್ಯುತ್ ಶಾಕ್ ಗೆ ಲೈನ್ ಮ್ಯಾನ್ ಒಬ್ಬರು ಮೃತಪಟ್ಟ ಘಟನೆ ಶುಕ್ರವಾರ ಸಂಭವಿಸಿದೆ.

ಹಾಸನ ಜಿಲ್ಲೆಯ ಹೊಳೆನರಸಿಪುರ ಸಿಗರನಹಳ್ಳಿ ನಿವಾಸಿ ಬಳ್ಪದಲ್ಲಿ ಪವರ್‌ಮ್ಯಾನ್ ಆಗಿದ್ದ ರಘು ಎಸ್.ಆರ್.(32) ಮೃತರು ಎಂದು ಗುರುತಿಸಲಾಗಿದೆ.

ಬಳ್ಪದ ಪಾದೆ ಸಮೀಪದ ನರಿಯಂಗ ಎಂಬಲ್ಲಿ ವಿದ್ಯುತ್ ಕಂಬ ಹತ್ತಿ ಕೆಲಸ ನಿರ್ವಹಣೆ ವೇಳೆ ಆಕಸ್ಮಿಕವಾಗಿ ವಿದ್ಯುತ್ ಪ್ರವಹಿಸಿ ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ.

ಘಟನಾ ಸ್ಥಳಕ್ಕೆ ಪೊಲೀಸರು ಹಾಗೂ ಮೆಸ್ಕಾಂ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Leave a Reply

error: Content is protected !!