ಜ.6 ರಂದು ಪಟ್ಟೂರಿನ ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ ಚಿಣ್ಣರ ಸಂಭ್ರಮ

ಶೇರ್ ಮಾಡಿ

ಪಟ್ಟೂರಿನ ಶ್ರೀರಾಮ ವಿದ್ಯಾ ಸಂಸ್ಥೆಯಲ್ಲಿ ಜನವರಿ 6ರಂದು ಚಿಣ್ಣರ ಸಂಭ್ರಮ ನಡೆಯಲಿದೆ. ಬೆಳಗ್ಗೆ 9.30ಕ್ಕೆ ನಡೆಯಲಿರುವ ಉದ್ಘಾಟನಾ ಕಾರ್ಯಕ್ರಮದಲ್ಲಿ ಕೊಕ್ಕಡದ ಪಂಚಮಿ ಹಿತಾಯುರ್ಧಾಮದ ವೈದ್ಯೆ ಡಾ.ತಾರಾ ಗಣೇಶ್ ಹಾಗೂ ಯುವ ಉದ್ಯಮಿ ಗಣೇಶ್ ಕಲಾಯಿ ಪಾಲ್ಗೊಳ್ಳಲಿದ್ದು, ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೆರವೇರಿಸಲಿದ್ದಾರೆ.

ಸಂಜೆ 5:00 ಗಂಟೆಗೆ ಶಾಲಾ ಮಕ್ಕಳ ಸಾಂಸ್ಕೃತಿಕ ಕಲರವದೊಂದಿಗೆ ಆರಂಭಗೊಂಡು 7 ಗಂಟೆಗೆ ಸರಿಯಾಗಿ ಸಭಾ ಕಾರ್ಯಕ್ರಮ ಜರುಗಲಿದೆ. ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು ಇದರ ಅಧ್ಯಕ್ಷರಾದ ಡಾ.ಪ್ರಭಾಕರ ಭಟ್ ಕಲ್ಲಡ್ಕ ಸಭಾಧ್ಯಕ್ಷತೆಯಲ್ಲಿ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್, ತುಮಕೂರು ವಿಶ್ವವಿದ್ಯಾನಿಲಯದ ಪತ್ರಿಕೋದ್ಯಮ & ಸಮೂಹ ಸಂವಹನ ವಿಭಾಗದ ಮುಖ್ಯಸ್ಥ ಡಾ॥ ಸಿಬಂತಿ ಪದ್ಮನಾಭ ಕೆ. ವಿ, ಅಗ್ರಿಲೀಫ್ ಎಕ್ಸ್‌ಪೋರ್ಟ್ ಪ್ರೈ ಲಿ. ಬರೆಂಗಾಯ ಇದರ ಮಾಲಕರಾದ ಅವಿನಾಶ್ ರಾವ್, ರೋಟರಿ ಕ್ಲಬ್ ನ ಅಧ್ಯಕ್ಷ ಅನಂತ ಭಟ್ ಮಚ್ಚಿಮಲೆ, ಲಯನ್ಸ್ ಕ್ಲಬ್ ನಲ ಅಧ್ಯಕ್ಷ ಉಮೇಶ್ ಶೆಟ್ಟಿ, ನಿಡ್ಲೆಯ ಕೃಷಿಕ ಮಧುಕರ ರಾವ್ ಮಚ್ಚಳೆ, ಶ್ರೀ ಸೌತಡ್ಕ ಮಹಾಗಣಪತಿ ಸೇವಾ ಟ್ರಸ್ಟ್ (ರಿ.) ಕಾರ್ಯದರ್ಶಿ ಕೃಷ್ಣ ಭಟ್ ಹಿತ್ತಿಲು, ಕೊಕ್ಕಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಕುಶಾಲಪ್ಪ ಗೌಡ ಪೂವಾಜೆ, ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ರಾಘವೇಂದ್ರ ನಾಯಕ್ ಬರ್ಗುಳ, ಸಾರ್ವಜನಿಕ ಶಿಕ್ಷಣ ಇಲಾಖೆಯ ನಿವೃತ್ತ ಕ್ಷೇತ್ರ ಸಮನ್ವಯಾಧಿಕಾರಿ ಗಣೇಶ್ ಐತಾಳ್, ನೈಮಿಷ ಹೌಸ್ ಆಫ್ ಸ್ಪೈಸಸ್ ನ ಮಾಲಕರಾದ ಬಾಲಕೃಷ್ಣ ನೈಮಿಷ, ಪಟ್ಟೂರಿನ ಶ್ರೀ ವಿಷ್ಣುಮೂರ್ತಿ ಅ.ಹಿ.ಪ್ರಾ. ಶಾಲೆಯ ಸ್ಥಾಪಕ ಸದಸ್ಯ ಕೃಷ್ಣಮೂರ್ತಿ ಭಟ್ ಕಳಂದೂರು, ಪಟ್ರಮೆ ಗ್ರಾ. ಪಂ.ಅಧ್ಯಕ್ಷ ಮನೋಜ್ ಅಂಗಾರಗುಡ್ಡೆ ವೇದಿಕೆಯಲ್ಲಿ ಉಪಸ್ಥಿತರಿರಲಿದ್ದಾರೆ.

ಸಭಾ ಕಾರ್ಯಕ್ರಮದ ಬಳಿಕ ಸಾಂಸ್ಕೃತಿಕ ಕಾರ್ಯಕ್ರಮ ಮುಂದುವರೆಯಲಿದ್ದು, ಶಾಲಾ ವಿದ್ಯಾರ್ಥಿಗಳು, ಶಿಕ್ಷಕರು,‌ಹಿರಿಯ ವಿದ್ಯಾರ್ಥಿಗಳು, ಹಾಗೂ ಜಿಲ್ಲೆಯ ಪ್ರಸಿದ್ಧ ಕಲಾವಿದರ ಕೂಡುವಿಕೆಯಿಂದ ದಕ್ಷ ಯಜ್ಞ ಎಂಬ ಯಕ್ಷಗಾನ ಬಯಲಾಟ ನಡೆಯಲಿದೆ‌‌ ಎಂದು ಆಯೋಜಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

error: Content is protected !!