ಬಂಡೆ ಕಲ್ಲಿಗೆ ಡಿಕ್ಕಿ ಹೊಡೆದ ಲಾರಿ; ಚಾಲಕ ಪ್ರಾಣಾಪಾಯದಿಂದ ಪಾರು

ಶೇರ್ ಮಾಡಿ

ಲಾರಿಯೊಂದು ಬಂಡೆ ಕಲ್ಲಿಗೆ ಡಿಕ್ಕಿ ಹೊಡೆದ ಘಟನೆ ಚಾರ್ಮಾಡಿ ಘಾಟ್ ನಲ್ಲಿ ನಡೆದಿದ್ದು, ಚಾಲಕನಿಗೆ ಸಣ್ಣ-ಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾನೆ.

ಕೊಟ್ಟಿಗೆಹಾರ ಕರಾವಳಿ ಮತ್ತು ಚಿಕ್ಕಮಗಳೂರು ಜಿಲ್ಲೆಗೆ ಸಂಪರ್ಕಿಸುವ ಚಾರ್ಮಾಡಿ ಘಾಟ್ ನ 6ನೇ ತಿರುವಿನಲ್ಲಿ ಗೊಬ್ಬರ ತುಂಬಿಸಿಕೊಂಡು ಚಿಕ್ಕಮಗಳೂರಿಯಿಂದ ಮಂಗಳೂರು ಕಡೆಗೆ ಸಾಗಿಸುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ಚಾರ್ಮಾಡಿ ಘಾಟ್ ನ ಬಂಡೆ ಕಲ್ಲಿಗೆ ಡಿಕ್ಕಿ ಹೊಡೆದಿದೆ.

ಘಟನೆಯ ಪರಿಣಾಮ ಲಾರಿಯ ಮುಂಬಾಗ ಸಂಪೂರ್ಣ ನಜ್ಜುಗುಜ್ಜಾಗಿ ಚಾಲಕನಿಗೆ ಸಣ್ಣ-ಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಗೆ ರವಾನಿಸಲಾಗಿದೆ.

ಚಾರ್ಮಾಡಿ ಘಾಟ್ ನಲ್ಲಿ ಎರಡು ದಿನದಿಂದ ತುಂತುರು ಮಳೆಯಾಗುತ್ತಿದ್ದು ಚಾಲಕನಿಗೆ ರಸ್ತೆ ಸರಿಯಾಗಿ ಕಾಣದೆ ಅಪಘಾತ ಸಂಭವಿಸಿದೆ ಎನ್ನಲಾಗಿದೆ.

Leave a Reply

error: Content is protected !!