ಖಾಸಗಿ ಬಸ್ ಪಲ್ಟಿ, ಪ್ರಯಾಣಿಕರಿಗೆ ಗಾಯ

ಶೇರ್ ಮಾಡಿ

ನೆಲ್ಯಾಡಿ : ಬೆಂಗಳೂರಿನಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ ರಾಷ್ಟ್ರೀಯ ಹೆದ್ದಾರಿ 75 ಶಿರಾಡಿಯಲ್ಲಿ ಪಲ್ಟಿಯಾಗಿ 5ಮಂದಿ ಪ್ರಯಾಣಿಕರು ಗಾಯಗೊಂಡಿರುವ ಘಟನೆ ಜ.6 ರಂದು ಬೆಳಿಗ್ಗೆ 5.30ಕ್ಕೆ ಸಂಭವಿಸಿದೆ.

ಗಾಯಗೊಂಡವರನ್ನು ರಶೀಕ್ (21), ಇಲಿಯಸ್(30)ಸಕಲೇಶಪುರ, ಪ್ರತೀಕ್ಷ(32)ಗೋಳಿತಟ್ಟು, ಮುಸ್ತಾಫ್ (26)ಮಂಗಳೂರು, ಅಮರನಾಥ್(26) ಗುಲ್ಬರ್ಗ ಎಂದು ಗುರುತಿಸಲಾಗಿದೆ.

ಗಾಯಗೊಂಡ ಮೂವರನ್ನು ನೆಲ್ಯಾಡಿ ಖಾಸಗಿ ಆಸ್ಪತ್ರೆಗೆ, ಉಳಿದ ಇಬ್ಬರನ್ನು ಪುತ್ತೂರಿನ ಸರಕಾರಿ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ.

ಸ್ಥಳಕ್ಕೆ ನೆಲ್ಯಾಡಿ ಹೊರ ಠಾಣೆಯ ಹೆಡ್‍ಕಾನ್‍ಸ್ಟೇಬಲ್ ಕುಶಾಲಪ್ಪ ನಾಯ್ಕ, ಪೊಲೀಸರಾದ ನಾಗರಾಜ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

Leave a Reply

error: Content is protected !!