ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ

ಶೇರ್ ಮಾಡಿ

ಪಡುವನ್ನೂರು ಗ್ರಾಮದ ಕನ್ನಡ್ಕ ಕಜೆಮೂಲೆ ನಿವಾಸಿ ಚಂದ್ರಶೇಖರ್ ಗೌಡ ದಂಪತಿಗಳ ಮಗಳು ದೀಕ್ಷಾ (16 ವರ್ಷ) ಜ.7ರ ಭಾನುವಾರ ಬೆಳಿಗ್ಗೆ ನೇಣುಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾಳೆ.

ಮನೆಯಲ್ಲಿದ್ದ ತಂದೆ-ತಾಯಿ ಕೃಷಿ ಕೆಲಸದಲ್ಲಿ ತೊಡಗಿಸಿಕೊಂಡ ಸಂದರ್ಭದಲ್ಲಿ ಮನೆಯಲ್ಲಿ ಒಬ್ಬಳೇ ಇದ್ದಳು. ಮನೆಯ ರೂಮಲ್ಲಿ ಫ್ಯಾನ್ ಗೆ ನೇಣುಹಾಕಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಪುತ್ತೂರು ಖಾಸಗಿ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿದ್ದಳು. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Leave a Reply

error: Content is protected !!