ಬೈಕ್‌ಗೆ ಅಪರಿಚಿತ ವಾಹನ ಡಿಕ್ಕಿ – ಸ್ಥಳದಲ್ಲೇ ಇಬ್ಬರು ಸಾವು

ಶೇರ್ ಮಾಡಿ

ಮುಂದೆ ಹೋಗುತ್ತಿದ್ದ ಬೈಕ್‌ಗೆ ಹಿಂಬದಿಯಿಂದ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತುಮಕೂರು ಜಿಲ್ಲೆ ಹುಲಿಯೂರು ದುರ್ಗದಲ್ಲಿ ನಡೆದಿದೆ.

ರಾಮನಗರ ಜಿಲ್ಲೆಯ ಚನ್ನಪಟ್ಟಣ ಮೂಲದ ಅಮಾನುತುಲ್ಲಾ ಖಾನ್ (60), ಮುನಾವರ್ (50) ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಈ ಇಬ್ಬರು ಬೈಕ್ ಸವಾರರು ಕಳೆದ ರಾತ್ರಿ ಹುಲಿಯೂರು ದುರ್ಗದ ಕಡೆಯಿಂದ ಚನ್ನಪಟ್ಟಣದ ಕಡೆಗೆ ಹೋಗುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ.

ಕೃಷ್ಣಪ್ಪನ ಕೊಪ್ಪಲು ಬಳಿ ವೇಗವಾಗಿ ಹಿಂಬದಿಯಿಂದ ಬಂದ ಅಪರಿಚಿತ ವಾಹನ ಬೈಕ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಬೈಕ್‌ನಲ್ಲಿದ್ದ ಇಬ್ಬರು ಸವಾರರು ರಸ್ತೆಯಲ್ಲಿ ಬಿದ್ದಿದ್ದು, ತಲೆಗೆ ತೀವ್ರ ಪೆಟ್ಟಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಈ ಕುರಿತು ಹುಲಿಯೂರು ದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಅಪರಿಚಿತ ವಾಹನದ ಪತ್ತೆಗೆ ಬಲೆ ಬೀಸಿದ್ದಾರೆ.

Leave a Reply

error: Content is protected !!