ಏ. 20, 21ರಂದು ನಿಗದಿಯಾಗಿದ್ದ ಸಿಇಟಿ ಪರೀಕ್ಷೆ ದಿನಾಂಕ ಬದಲು: ಇಲ್ಲಿದೆ ಪರಿಷ್ಕೃತ ವೇಳಾಪಟ್ಟಿ

ಶೇರ್ ಮಾಡಿ

2024ನೇ ಸಾಲಿನ ಇಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್​ಗಳಿಗೆ ಇದೇ ಏಪ್ರಿಲ್ 20 ಮತ್ತು 21ರಂದು ಸಿಇಟಿ(ಸಾಮಾನ್ಯ ಪ್ರವೇಶ ಪರೀಕ್ಷೆ) ನಡೆಸಲು ದಿನಾಂಕ ನಿಗದಿ ಮಾಡಲಾಗಿತ್ತು. ಆದ್ರೆ, ಇದೀಗ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ದಿನಾಂಕವನ್ನು ಬದಲಾವಣೆ ಮಾಡಿದ್ದು, ಏಪ್ರೀಲ್ 18 ಮತ್ತು 19ರಂದು ಸಿಇಟಿ ಪರೀಕ್ಷೆ ನಡೆಸಲು ತೀರ್ಮಾನಿಸಿದೆ. ಈ ಬಗ್ಗೆ ಕೆಇಎ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್. ರಮ್ಯಾ ಅವರು ಮಾಧ್ಯಮ ಪ್ರಕಟಣೆ ಹೊರಡಿಸಿದ್ದಾರೆ.

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು 2024ನೇ ಸಾಲಿನ ವಿವಿಧ ವೃತ್ತಿ ಪರ ಕೋರ್ಸ್‌ಗಳ ಪ್ರವೇಶ ಪರೀಕ್ಷೆಗಳ ದಿನಾಂಕವನ್ನು ನಾಲ್ಕು ತಿಂಗಳು ಮೊದಲೇ ಪ್ರಕಟಿಸಿತ್ತು. ಎಂಜಿನಿಯರಿಂಗ್‌, ಕೃಷಿ, ಪಶು ಸಂಗೋಪನೆ, ನರ್ಸಿಂಗ್‌, ಫಾರ್ಮಸಿ, ಆಯುಷ್ ಸಹಿತ ವಿವಿಧ ವೃತ್ತಿಪರ ಕೋರ್ಸ್‌ ಗಳಿಗೆ 2024ರ ಪ್ರವೇಶ ಪರೀಕ್ಷೆಗಳನ್ನು ಏಪ್ರಿಲ್‌ 20 ಮತ್ತು 21ರಂದು ನಿಗದಿ ಮಾಡಲಾಗಿತ್ತು. ಆದ್ರೆ, ಏಪ್ರಿಲ್ 21ರಂದು ಎನ್ ಡಿ ಎ ಪರೀಕ್ಷೆ ನಡೆಯಲಿದೆ. ಹೀಗಾಗಿ ಕೆಇಎ, ಸಿಇಟಿ ಪರೀಕ್ಷೆ ದಿನಾಂಕವನ್ನು ಬದಲಾವಣೆ ಮಾಡಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

ಇನ್ನು ಜನವರಿ 10ರಿಂದ ಆನ್​ಲೈನ್ ಮೂಲಕ ಅರ್ಜಿ ಸಲ್ಲಿಕೆಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅವಕಾಶ ನೀಡಿದೆ. ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸುವಾಗ ಅಭ್ಯರ್ಥಿಗಳು ಸರಿಯಾದ ಆರ್‌.ಡಿ. ಸಂಖ್ಯೆ, ಜಾತಿ/ಆದಾಯ ಪ್ರಮಾಣಪತ್ರ ಮತ್ತು ಕಲ್ಯಾಣ ಕರ್ನಾಟಕ (371ಜೆ) ಪ್ರಮಾಣಪತ್ರಕ್ಕೆ ಸಂಬಂಧಿಸಿದ ಅಗತ್ಯ ವಿವರಗಳನ್ನು ಸಲ್ಲಿಕೆ ಮಾಡಬೇಕು.

Leave a Reply

error: Content is protected !!