ಉಪ್ಪಿನಂಗಡಿ: ನಾಡಕಚೇರಿ, ಆರೋಗ್ಯ ಕೇಂದ್ರಕ್ಕೆ ಎಸಿ ದಿಢೀರ್ ಭೇಟಿ

ಶೇರ್ ಮಾಡಿ

ಉಪ್ಪಿನಂಗಡಿ ಇಲ್ಲಿನ ನಾಡ ಕಚೇರಿ ಹಾಗೂ ಸಮುದಾಯ ಆರೋಗ್ಯ ಕೇಂದ್ರಕ್ಕೆ ಜ.9ರಂದು ದಿಢೀರ್ ಭೇಟಿ ನೀಡಿದ ಪುತ್ತೂರು ಉಪವಿಭಾಗದ ಸಹಾಯಕ ಆಯುಕ್ತರಾದ ಜುಬಿನ್ ಮಹೋಪಾತ್ರ ಅವರು ಅಲ್ಲಿನ ವ್ಯವಸ್ಥೆಗಳ ಬಗ್ಗೆ ಪರಿಶೀಲನೆ ನಡೆಸಿದರು.

ನಾಡಕಚೇರಿಗೆ ಭೇಟಿ ನೀಡಿದ ಅವರು ಸಕಾಲ ವ್ಯಾಪ್ತಿಯ ಕಡತಗಳು, ಪಿಂಚಣಿಯ ಕಡತಗಳು ಹಾಗೂ ಸಾರ್ವಜನಿಕರ ಕುಂದುಕೊರತೆಗಳ ಬಗ್ಗೆ ಪರಿಶೀಲನೆ ನಡೆಸಿದರು. ಈ ಸಂದರ್ಭ ಉಪ್ಪಿನಂಗಡಿ ಹೋಬಳಿ ನಾಡಕಚೇರಿಯ ಉಪತಹಶೀಲ್ದಾರ್ ಚೆನ್ನಪ್ಪ ಗೌಡ, ಕಂದಾಯ ನಿರೀಕ್ಷಕರಾದ ಚಂದ್ರ ನಾಯ್ಕ ಉಪಸ್ಥಿತರಿದ್ದು, ಮಾಹಿತಿ ನೀಡಿದರು. ಉಪ್ಪಿನಂಗಡಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ತೆರಳಿದ ಅವರು ಅಲ್ಲಿ ವ್ಯವಸ್ಥೆಗಳ ಬಗ್ಗೆ, ಔಷಧಿಗಳ ದಾಸ್ತಾನುಗಳ ಬಗ್ಗೆ ಪರಿಶೀಲಿಸಿದರಲ್ಲದೆ, ರೋಗಿಗಳನ್ನು ಭೇಟಿಯಾಗಿ ಇಲ್ಲಿನ ಕುಂದುಕೊರತೆಗಳ ಬಗ್ಗೆ ವಿಚಾರಿಸಿದರು.

ಈ ಸಂದರ್ಭ ಆರೋಗ್ಯ ಕೇಂದ್ರದ ಆಡಳಿತಾಧಿಕಾರಿ ಡಾ. ಕೃಷ್ಣಾನಂದ ಹಾಗೂ ಸಿಬ್ಬಂದಿ ಉಪಸ್ಥಿತರಿದ್ದು, ಮಾಹಿತಿ ನೀಡಿದರು.

Leave a Reply

error: Content is protected !!