ತುಮಕೂರು ಜಿಲ್ಲೆಯ ಹಾಸ್ಟೆಲ್ ಒಂದರಲ್ಲಿ ವ್ಯಾಸಂಗ ಮಾಡುತ್ತಿದ್ದ 9ನೇ ತರಗತಿ ವಿದ್ಯಾರ್ಥಿನಿ ಬಾಗೇಪಲ್ಲಿ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ್ದಾಳೆ. ಅಪ್ರಾಪ್ತ ವಯಸ್ಸಿನಲ್ಲಿ ವಿದ್ಯಾರ್ಥಿನಿಯ ಮೇಲೆ ಯಾರು ಅತ್ಯಾಚಾರ ಮಾಡಿದ್ದಾರೆ ಎಂಬುದೇ ಈಗ ಯಕ್ಷ ಪ್ರಶ್ನೆಯಾಗಿದೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಆಸ್ಪತ್ರೆಯಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಗೆ ಹೆರಿಗೆಯಾಗಿದೆ, ಈ ಬಗ್ಗೆ ಆಸ್ಪತ್ರೆಯಿಂದ ಪೊಲೀಸರಿಗೆ ಮಾಹಿತಿ ನೀಡಲಾಗಿದೆ. ಆಗ ಬಂದು ವಿದ್ಯಾರ್ಥಿನಿಯ ಬಗ್ಗೆ ಮಾಹಿತಿ ಸಂಗ್ರಹ ಮಾಡಿದಾಗ ಆಕೆ, 9ನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿನಿ ಎಂದು ತಿಳಿದುಬಂದಿದೆ. ವಿದ್ಯಾರ್ಥಿನಿ ಗಂಡು ಮಗುವಿಗೆ ಜನ್ಮ ನೀಡಿದ್ದಾಳೆ. ತಾಯಿ ಮತ್ತು ಮಗು ಇಬ್ಬರೂ ಆರೋಗ್ಯವಾಗಿದ್ದಾರೆ. ಆದರೆ, ಅಪ್ರಾಪ್ತ ವಿದ್ಯಾರ್ಥಿನಿಯ ಮೇಲೆ ಯಾರು ಅತ್ಯಾಚಾರ ಮಾಡಿದ್ದಾರೆ ಎಂಬ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಬಾಗೇಪಲ್ಲಿ ಠಾಣೆಯ ಪೊಲೀಸರಿಂದ ಪೋಕ್ಸೋ ಕೇಸ್ ದಾಖಲು ಮಾಡಿಕೊಳ್ಳಲಾಗಿದೆ.