ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಧಾರ್ಮಿಕ ಪರಿಷತ್ ರಾಜ್ಯ ಸದಸ್ಯೆ ಶ್ರೀಮತಿ ಮಲ್ಲಿಕಾ ಪಕ್ಕಳ ಹಾಗೂ ಮೂಡಿಗೆರೆ ಶಾಸಕಿ ನಯನ ಮೋಟಮ್ಮ ಭೇಟಿ

ಶೇರ್ ಮಾಡಿ

ಕೊಕ್ಕಡ: ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಧಾರ್ಮಿಕ ಪರಿಷತ್ ರಾಜ್ಯ ಸದಸ್ಯೆ ಹಾಗೂ ಶ್ರೀಮತಿ ಮಲ್ಲಿಕಾ ಪಕ್ಕಳ ಮೂಡಿಗೆರೆ ಶಾಸಕಿ ನಯನ ಮೋಟಮ್ಮ ಜ.10 ರಂದು ಭೇಟಿ ನೀಡಿದರು.

ಈ ಹಿಂದೆ ಪ್ರಾರ್ಥಿಸಿದಂತೆ ಶಾಸಕಿ ನಯನ ಮೋಟಮ್ಮರಿಂದ ಮಹಾಗಣಪತಿ ದೇವರಿಗೆ ವಿಶೇಷ ರಂಗಪೂಜೆ ಸೇವೆಯನ್ನು ನೆರವೇರಿಸಿದರು.

ಈ ಸಂದರ್ಭದಲ್ಲಿ ಧಾರ್ಮಿಕ ಪರಿಷತ್ ರಾಜ್ಯ ಸದಸ್ಯೆ ಶ್ರೀಮತಿ ಮಲ್ಲಿಕಾ ಪಕಳ, ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಹರೀಶ್ ರಾವ್ ಮುಂಡ್ರುಪಾಡಿ, ಅರ್ಚಕರಾದ ಶ್ರೀ ಸುಬ್ರಮಣ್ಯ ತೋಡ್ತಿಲ್ಲಾಯರು, ಕಾರ್ಯನಿರ್ವಹಣಾಧಿಕಾರಿ ಶ್ರೀನಿವಾಸ, ವ್ಯವಸ್ಥಾಪನ ಸಮಿತಿಯ ಸದಸ್ಯರುಗಳು ಮತ್ತು ಸಿಬ್ಬಂದಿಗಳು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.

ಕ್ಷೇತ್ರದ ಸಂಪ್ರದಾಯದಂತೆ ಇವರನ್ನು ಶಾಲು ಹೊದಿಸಿ ಪ್ರಸಾದ ನೀಡಿ ಗೌರವಿಸಲಾಯಿತು.

Leave a Reply

error: Content is protected !!