ರಸ್ತೆ ದಾಟುತ್ತಿದ್ದ ವೇಳೆ ಕಾರು ಢಿಕ್ಕಿ: ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ರಿಗೆ ಗಾಯ

ಶೇರ್ ಮಾಡಿ

ಮಂಗಳೂರು: ಇಲ್ಲಿನ ತೆಂಕ ಯಡಪದವು ಗೋಪಾಲಕೃಷ್ಣ ದೇವಸ್ಥಾನದ ಬಳಿ ರಸ್ತೆ ದಾಟುತ್ತಿದ್ದ ಬಂಟ್ವಾಳ ಶಾಸಕ ಯು.ರಾಜೇಶ್ ನಾಯ್ಕ್ ಅವರಿಗೆ ಕಾರು ಢಿಕ್ಕಿ ಹೊಡೆದ ಘಟನೆ ಭಾನುವಾರ ಮಧ್ಯಾಹ್ನ ಸಂಭವಿಸಿದೆ.

ಮಧ್ಯಾಹ್ನ 1.30ರ ಸುಮಾರಿಗೆ ರಾಜೇಶ್ ನಾಯ್ಕ್ ಅವರು ತೆಂಕ ಯಡಪದವು ಗೋಪಾಲ ಕೃಷ್ಣ ದೇವಸ್ಥಾನದ ಬಳಿ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡು ಕಾಲ್ನಡಿಗೆಯಲ್ಲಿ ರಸ್ತೆ ದಾಟುತ್ತಿದ್ದಾಗ ಈ ಘಟನೆ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಶಾಸಕ ರಾಜೇಶ್ ನಾಯ್ಕ್ ಅವರ ಎರಡು ಮೊಣಕಾಲುಗಳಿಗೆ ಗಾಯಗಳಾಗಿದ್ದು, ಸದ್ಯ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮೂಡುಬಿದಿರೆಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಸ್ವಿಫ್ಟ್ ಕಾರು ಶಾಸಕರಿಗೆ ಢಿಕ್ಕಿ ಹೊಡೆದ ಬಳಿಕ ನಿಲ್ಲಿಸದೆ ಸ್ಥಳದಿಂದ ಪರಾರಿಯಾಗಿದ್ದು, ಕಾರ್ಯಪ್ರವೃತ್ತರಾದ 112 ಹೊಯ್ಸಳ ಪೊಲೀಸ್ ತಂಡ ಗುರುಪುರ ಜಂಕ್ಷನ್‌ನಲ್ಲಿ ಕಾರನ್ನು ತಡೆದು ಠಾಣೆಗೆ ತಂದಿದ್ದಾರೆ.

ಪ್ರತ್ಯಕ್ಷದರ್ಶಿಯೊಬ್ಬರ ದೂರಿನ ಆಧಾರದ ಮೇಲೆ ಬಜ್ಪೆ ಪೊಲೀಸ್ ಠಾಣೆಯಲ್ಲಿ ಕಾರು ಚಾಲಕನ ವಿರುದ್ಧ ಕಲಂ 279, 337 ಐಪಿಸಿ, 134(ಎ)(ಬಿ) ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.

Leave a Reply

error: Content is protected !!