ಮಂಗಳೂರು: ಪೊಲೀಸ್‌ ಸಿಬಂದಿ ನಾಪತ್ತೆ

ಶೇರ್ ಮಾಡಿ

ಬೆಳ್ತಂಗಡಿ ಇಲ್ಲಿಯ ಸೋಣಂದೂರು ಗ್ರಾಮದ ಪಣಕಜೆ ಎಂಬಲ್ಲಿ ಮಕ್ಕಳ ಜತೆ ಆಟವಾಡುತ್ತಿದ್ದ ಏಳು ವರ್ಷದ ಬಾಲಕ ಆಕಸ್ಮಿಕವಾಗಿ ಕಾಲು ಜಾರಿ ಬಾವಿಗೆ ಬಿದ್ದು ಮೃತಪಟ್ಟ ಘಟನೆ ಜ. 15ರಂದು ಸಂಜೆ ನಡೆದಿದೆ.

ಪಣಕಜೆ ನಿವಾಸಿ ಮಹಮ್ಮದ ಹನೀಫ್‌ ಅವರ ದ್ವಿತೀಯ ಪುತ್ರ ಮಹಮ್ಮದ್‌ ಅನಾನ್‌ (7) ಮೃತಪಟ್ಟ ಬಾಲಕ. ಸೋಮವಾರ ಶಾಲೆಗೆ ರಜೆ ಇದ್ದ ಕಾರಣ ಪಕ್ಕದ ಮನೆಯ ಮಕ್ಕಳ ಜತೆ ಆಟವಾಡುತ್ತಿದ್ದಾಗ ಈ ಘಟನೆ ನಡೆದಿದೆ.

ಕಟ್ಟೆ ಇಲ್ಲದ ಬಾವಿಯ ಬಳಿ ಮಕ್ಕಳು ಆಟವಾಡುತ್ತಿದ್ದಾಗ ಬಾಲಕ ಅನಾನ್‌ ಆಕಸ್ಮಿಕವಾಗಿ ಕಾಲು ಜಾರಿ ಬಾವಿಗೆ ಬಿದ್ದನೆನ್ನಲಾಗಿದೆ.

ಕೂಡಲೇ ಸ್ಥಳೀಯರ ಸಹಕಾರದಲ್ಲಿ ಬಾಲಕನನ್ನು ಮೇಲಕ್ಕೆತ್ತಿ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದರೂ, ಆದಾಗಲೇ ಬಾಲಕ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಈತ ಸ್ಥಳೀಯ ಶಾಲೆಯ ಎರಡನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ. ಪುಂಜಾಲಕಟ್ಟೆ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Leave a Reply

error: Content is protected !!