ಉಜಿರೆ ಶ್ರೀ ಧ. ಮಂ. ಪ.ಪೂ. ಕಾಲೇಜು:  ಕನ್ನಡ ಐಚ್ಛಿಕದಲ್ಲಿ ಉನ್ನತ ಕಲಿಕೆಯ ಅವಕಾಶಗಳ ಬಗ್ಗೆ ಮಾಹಿತಿ ಕಾರ್ಯಕ್ರಮ

ಶೇರ್ ಮಾಡಿ

ಶ್ರೀ ಧ.ಮಂ.ಪ.ಪೂ. ಕಾಲೇಜು ಉಜಿರೆ ಇಲ್ಲಿನ ಕನ್ನಡ ವಿಭಾಗದ ವತಿಯಿಂದ ಕಲಾ ವಿಭಾಗದ ವಿದ್ಯಾರ್ಥಿಗಳಿಗೆ ಕನ್ನಡವನ್ನು  ಐಚ್ಛಿಕದಲ್ಲಿ ಉನ್ನತ ಕಲಿಕೆಯ ಅವಕಾಶಗಳ ಬಗ್ಗೆ ಮಾಹಿತಿ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ಶ್ರೀ ಧ. ಮಂ.ಪದವಿ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥರಾದ ಶ್ರೀಮತಿ ಬೋಜಮ್ಮರವರು ಕನ್ನಡವನ್ನು ಐಚ್ಛಿಕವಾಗಿ ಓದುವುದರಿಂದ ಭಾಷಾಂತರಗಾರರಾಗಿ, ಪತ್ರಿಕಾ ರಂಗದಲ್ಲಿ, ಮಾಧ್ಯಮಗಳಲ್ಲಿ, ಕನ್ನಡ ಶಿಕ್ಷಕರಾಗಿ, ಉಪನ್ಯಾಸಕರಾಗಿ ಮುಂತಾದ ಕ್ಷೇತ್ರಗಳಲ್ಲಿ ಇರುವ ಉದ್ಯೋಗದ ಅವಕಾಶಗಳ ಬಗ್ಗೆ ತಿಳಿಸಿಕೊಟ್ಟರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಪ್ರಾಂಶುಪಾಲರಾದ ಪ್ರಮೋದ್ ಕುಮಾರ್ ಜೈನ್ ಮಾತನಾಡಿ ಕನ್ನಡವನ್ನು ಐಚ್ಛಿಕವಾಗಿ ಓದುವುದರಿಂದ ಕನ್ನಡ ಭಾಷೆಯಲ್ಲಿ ಹೆಚ್ಚಿನ ಹಿಡಿತ ಸಾಧಿಸಬಹುದು. ಕನ್ನಡ ಭಾಷೆಯಲ್ಲಿ ಹಿಡಿತವಿದ್ದರೆ ಹಲವಾರು ಅವಕಾಶಗಳು ಗಿಟ್ಟಿಸಿಕೊಳ್ಳಬಹುದು ಎಂದು  ಹೇಳಿದರು.

ವೇದಿಕೆಯಲ್ಲಿ ಕಾಲೇಜಿನ ಉಪ ಪ್ರಾಂಶುಪಾಲರು ಹಾಗೂ ಕನ್ನಡ ವಿಭಾಗದ ಮುಖ್ಯಸ್ಥರಾದ ರಾಜೇಶ್ ಬಿ. ಉಪಸ್ಥಿತರಿದ್ದರು. ಕಾಲೇಜಿನ ಕನ್ನಡ ಉಪನ್ಯಾಸಕರಾದ ವಿಶ್ವನಾಥ್ ಎಸ್. ಅವರು ಕಾರ್ಯಕ್ರಮ ನಿರೂಪಿಸಿದರು.

Leave a Reply

error: Content is protected !!