ಸ್ಕೂಟರ್‌ಗೆ ಬಸ್‌ ಢಿಕ್ಕಿ, ಸವಾರ ಸಾವು

ಶೇರ್ ಮಾಡಿ

ಸರಕಾರಿ ಬಸ್‌ ಮತ್ತು ದ್ವಿಚಕ್ರ ವಾಹನ ಢಿಕ್ಕಿಯಾಗಿ ಸ್ಕೂಟರ್‌ ಸವಾರ ಮೃತಪಟ್ಟ ಘಟನೆ ಪುಂಜಾಲಕಟ್ಟೆ ಪ್ರಾಥಮಿಕ ಆರೋಗ್ಯ ಕೇಂದ್ರದ ಬಳಿ ಮಂಗಳವಾರ ಸಂಭವಿಸಿದೆ.

ಬೈಕ್‌ ಸವಾರ ಪುತ್ತೂರು ತಾಲೂಕಿನ ಕೊಳ್ತಿಗೆ, ಮಣಿಕ್ಕರ ಮೊಗಪ್ಪೆ ನಿವಾಸಿ ಸತೀಶ್‌ ಕುಮಾರ್‌ ಅವರ ಪುತ್ರ ನಂದಕುಮಾರ್‌ ಎಂ.(25)ಮೃತಪಟ್ಟವರು.

ಧರ್ಮಸ್ಥಳದಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ ಸರಕಾರಿ ಬಸ್‌ ರಾಷ್ಟ್ರೀಯ ಹೆದ್ದಾರಿಯಲ್ಲಿ ಪುಂಜಾಲಕಟ್ಟೆಯ ಆಸ್ಪತ್ರೆ ತಿರುವು ಬಳಿ ಸ್ಕೂಟರ್‌ಗೆ ಢಿಕ್ಕಿಯಾಗಿತ್ತು. ಅಪಘಾತದಿಂದ ಗಂಭೀರ ಗಾಯಗೊಂಡ ಅವರನ್ನು ತತ್‌ಕ್ಷಣ ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅದಾಗಲೇ ಅವರು ಮೃತಪಟ್ಟಿದ್ದರು.

ನಂದಕುಮಾರ್‌ ಅವರು ರಬ್ಬರ್‌ ಟ್ಯಾಪಿಂಗ್‌ ವೃತ್ತಿ ನಡೆಸುತ್ತಿದ್ದರು. ಪುಂಜಾಲಕಟ್ಟೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

error: Content is protected !!