ರೈತರೊಬ್ಬರು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ಸುಳ್ಯ ತಾಲೂಕಿನ ಮರ್ಕಂಜ ಗ್ರಾಮದಲ್ಲಿ ರವಿವಾರ ನಡೆದಿದೆ.
ಯಕ್ಷಗಾನದ ಹಿಮ್ಮೇಳದಲ್ಲಿ ಚೆಂಡೆ, ಮದ್ದಳೆ ವಾದಕರಾಗಿ ಪ್ರಸಿದ್ಧರಾಗಿದ್ದ, ಕೃಷಿಕ ನಾರಾಯಣ ನಾಯಕ್ ತೋಟಚಾವಡಿ(52) ಎಂಬವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ರವಿವಾರ ಮುಂಜಾನೆ ನಾರಾಯಣ ನಾಯಕ್ ರವರು ತಮ್ಮ ಮನೆ ಬಾಗಿಲು ತೆರೆಯದ ಕಾರಣ, ಪಕ್ಕದ ಮನೆಯವರು ಬಂದು ನೋಡಿದಾಗ ನಾರಾಯಣ ಅವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.ಸುಳ್ಯ ಪೊಲೀಸರು ಸ್ಥಳಕ್ಕೆ ಆಗಮಿಸಿ ಕೇಸು ದಾಖಲಿಸಿಕೊಂಡಿದ್ದಾರೆ.