ತೆಂಗಿನ ಮರದಿಂದ ಬಿದ್ದು ವ್ಯಕ್ತಿ ಮೃತ್ಯು

ಶೇರ್ ಮಾಡಿ

ತೆಂಗಿನ ಮರದಿಂದ ಬಿದ್ದು ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ನೇತ್ರಾವತಿ ನದಿ ಸಮೀಪದ ಸೋಮನಾಥ ಉಳಿಯ ಎಂಬಲ್ಲಿ ಇಂದು ಬೆಳಿಗ್ಗೆ ಸಂಭವಿಸಿದೆ.

ಮೂಲತ: ಧರ್ಮಸ್ಥಳ ಪುದುವೆಟ್ಟು ನಿವಾಸಿ ಸದ್ಯ ಸಂತೋಷ ನಗರದಲ್ಲಿ ನೆಲೆಸಿರುವ ವಿಶ್ವಾಂಬರನ್ (58) ಮೃತಪಟ್ಟವರು. ಎಂದಿನಂತೆ ಇಂದು ಮುಂಜಾನೆ ಕುತ್ತಾರು ಸೋಮನಾಥ ಉಳಿಯ ಸಮೀಪದ ತೆಂಗಿನಮರಕ್ಕೆ ಶೇಂದಿ ತೆಗೆಯಲು ಹತ್ತಿದ್ದವರು ಕಾಲುಜಾರಿ ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಮೃತರು ಪತ್ನಿ ಹಾಗೂ ಮೂವರು ಪುತ್ರಿಯರನ್ನು ಅಗಲಿದ್ದಾರೆ. ಕೊಣಾಜೆ ಮೂರ್ತೆದಾರರ ಸಂಘದ ಮಾಜಿ ನಿರ್ದೇಶಕರು. ಈ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

error: Content is protected !!