ಅನಾರೋಗ್ಯದಿಂದ ಪುತ್ತೂರಿನ ಯುವತಿ ಮೃತ್ಯು

ಶೇರ್ ಮಾಡಿ

ಅನಾರೋಗ್ಯದಿಂದ ಯುವತಿಯೋರ್ವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ನಡೆದಿದೆ.

ಪುತ್ತೂರು ನೆಹರೂನಗರದ ದಿ.ಆನಂದ ನಾಯ್ಕ ಅವರ ಪುತ್ರಿ ಐಶ್ವರ್ಯ(29) ಬುಧವಾರ ಬೆಳಗ್ಗೆ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ. ಇವರು ಇಂಜಿನಿಯರಿಂಗ್ ಪದವೀಧರೆಯಾಗಿದ್ದರು.

ಲಿವರ್ ಸಮಸ್ಯೆಯಿಂದಾಗಿ ಐಶ್ವರ್ಯ ಅವರು ಬೆಂಗಳೂರಿನ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಲಿವರ್ ಬದಲಾವಣೆಯಿಂದ ಮಾತ್ರ ಐಶ್ವರ್ಯಳ ಜೀವ ಉಳಿಸಲು ಸಾಧ್ಯ ಎಂದು ವೈದ್ಯರು ತಿಳಿಸಿದ್ದರು.

ಈ ನಿಟ್ಟಿನಲ್ಲಿ ಸಾರ್ವಜನಿಕ ಸಹಾಯಯಾಚಿಸಿ ಸಾಮಾಜಿಕ ಜಾಲತಾಣಗಳಲ್ಲೂ ಹಾಕಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಬೆಂಗಳೂರಿನ ಅಪೋಲೋ ಆಸ್ಪತ್ರೆಯಲ್ಲಿ ಐಶ್ವರ್ಯ ನಿಧನ ಹೊಂದಿದ್ದಾರೆ.

ಮೃತರು ತಾಯಿ ವಿಮಲ, ತಂಗಿ ಅನುಷಾ ಮತ್ತು ಅಪಾರ ಬಂದು ಬಳಗವನ್ನು ಅಗಲಿದ್ದಾರೆ.

Leave a Reply

error: Content is protected !!