ಆಲಂಕಾರು ಶ್ರೀ ಭಾರತಿ ವಿದ್ಯಾಸಂಸ್ಥೆಯಲ್ಲಿ ಗಣರಾಜ್ಯೋತ್ಸವ ಸಂಭ್ರಮಾಚರಣೆ

ಶೇರ್ ಮಾಡಿ

ಶ್ರೀ ಭಾರತಿ ವಿದ್ಯಾಸಂಸ್ಥೆಗಳು ಆಲಂಕಾರು ಇಲ್ಲಿ ಗಣರಾಜ್ಯೋತ್ಸವ ಸಂಭ್ರಮಾಚರಣೆ ನಡೆಯಿತು. ಧ್ವಜಾರೋಹಣವನ್ನು ಸಂಸ್ಥೆಯ ಹಿರಿಯ ವಿದ್ಯಾರ್ಥಿ, ಯುವ ಉದ್ಯಮಿಯಾಗಿರುವ ಭಗವತಿ ಕಿರಣ್ ಪಜ್ಜಡ್ಕ ನೆರವೇರಿಸಿ ವಿದ್ಯಾರ್ಥಿಗಳಿಗೆ ಗಣರಾಜ್ಯ ದಿನದ ಸಂದೇಶವನ್ನು ನೀಡಿದರು.

ಈ ಸಂದರ್ಭದಲ್ಲಿ ಸಂಸ್ಥೆಯ ಆಡಳಿತ ಮಂಡಳಿಯ ಕಾರ್ಯದರ್ಶಿ ಶೇಖರ್ ಶೆಟ್ಟಿ, ಕನ್ನಡ ಮಾಧ್ಯಮ ವಿಭಾಗದ ಶಿಕ್ಷಕ – ರಕ್ಷಕ ಸಂಘದ ಅಧ್ಯಕ್ಷ ಶ್ರೀನಾಥ್ ಕೇವಳ, ಆಂಗ್ಲ ಮಾಧ್ಯಮ ವಿಭಾಗದ ಮುಖ್ಯಗುರುಗಳಾದ ಸತೀಶ್ ಕುಮಾರ್ ಜಿ.ಆರ್, ಕನ್ನಡ ಮಾಧ್ಯಮ ವಿಭಾಗದ ಮುಖ್ಯ ಮಾತಾಜಿ ಶ್ರೀಮತಿ ಆಶಾ ಎಸ್ ರೈ, ಶಿಕ್ಷಕ, ಶಿಕ್ಷಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಧ್ವಜಾರೋಹಣದ ಬಳಿಕ ಗಣರಾಜ್ಯ ದಿನದ ಪ್ರಯುಕ್ತ ಹಮ್ಮಿಕೊಳ್ಳಲಾದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ಬಳಿಕ ವಿದ್ಯಾರ್ಥಿಗಳಿಗೆ ಸಿಹಿತಿಂಡಿ ವಿತರಿಸಲಾಯಿತು. ಮುಖ್ಯ ಶಿಕ್ಷಕ ಸತೀಶ್ ಕುಮಾರ್ ಜಿ ಆರ್ ಸ್ವಾಗತಿಸಿದರು. ಶ್ರೀಮತಿ ರೂಪ ವಂದನಾರ್ಪಣೆಗೈದರು. ಶ್ರೀಮತಿ ರೇಣುಕಾ ಕಾರ್ಯಕ್ರಮವನ್ನು ನಿರೂಪಿಸಿದರು.

Leave a Reply

error: Content is protected !!