ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಭೇಟಿ

ಶೇರ್ ಮಾಡಿ

ಕೊಕ್ಕಡ: ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಇಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಪತ್ನಿ ಶ್ರೀಮತಿ ಚೆನ್ನಮ್ಮ ಸಮೇತರಾಗಿ ಆಗಮಿಸಿ ದೇವರ ದರ್ಶನ ಪಡೆದರು.

ಮಾಜಿ ಪ್ರಧಾನಿ ಅವರಿಗೆ ಕ್ಷೇತ್ರ ವತಿಯಿಂದ ವಿಶೇಷವಾಗಿ ಗೌರವಿಸಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾದ ಹರೀಶ್ ರಾವ್ ಮುಂಡ್ರುಪಾಡಿ, ರಾಜ್ಯ ಧಾರ್ಮಿಕ ಪರಿಷತ್ತಿನ ಸದಸ್ಯ ಶ್ರೀಮತಿ ಮಲ್ಲಿಕಾ ಪ್ರಶಾಂತ್ ಪಕಳ, ವ್ಯವಸ್ಥಾಪನ ಸಮಿತಿಯ ಸದಸ್ಯರು, ಕ್ಷೇತ್ರದ ಅರ್ಚಕರು, ಸಿಬ್ಬಂದಿ ವರ್ಗ, ಭಕ್ತಾದಿಗಳು ಹಾಗೂ ಮಾಜಿ ಪ್ರಧಾನಿಯವರ ಭಕ್ತ ಅಭಿಮಾನಿಗಳು ಉಪಸ್ಥಿತರಿದ್ದರು.

Leave a Reply

error: Content is protected !!