ವರ್ತಕ ಮತ್ತು ಕೈಗಾರಿಕಾ ಸಂಘ (ರಿ.) ನೆಲ್ಯಾಡಿ- ಕೌಕ್ರಾಡಿ ಇದರ ಪದಗ್ರಹಣ ಸಮಾರಂಭ ಜ.31ರಂದು ಸಂತ ಚಾರ್ಜ್ ವಿದ್ಯಾಸಂಸ್ಥೆಯ ಸಭಾಂಗಣದಲ್ಲಿ ನಡೆಯಿತು.
ಕಾರ್ಯಕ್ರಮವನ್ನು ದೀಪ ಪ್ರಜ್ವಲಿಸುವ ಮೂಲಕ ಸಂತ ಚಾರ್ಜ್ ವಿದ್ಯಾಸಂಸ್ಥೆಯ ಸ್ಥಾಪಕ ಕಾರ್ಯದರ್ಶಿ ಅಬ್ರಹಾಂ ವರ್ಗೀಸ್ ಉದ್ಘಾಟಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.
ಮುಖ್ಯ ಅತಿಥಿಗಳಾದ ಪುತ್ತೂರು ಚೇಂಬರ್ ಆಫ್ ಕಾಮರ್ಸ್ ಮತ್ತು ಇಂಡಸ್ಟ್ರೀಸ್ ನ ಅಧ್ಯಕ್ಷರಾದ ವಾಮನ ಪೈ ಮಾತನಾಡಿ ವ್ಯವಹಾರಗಳಲ್ಲಿ ಪ್ರಾಮಾಣಿಕತೆ, ಜನರೊಂದಿಗೆ ಸ್ಪಂದನೆ ಹಾಗೂ ತೆರಿಗೆ ಪಾವತಿಸುವುದರಿಂದ ಆಗುವ ಅನುಕೂಲಗಳ ಬಗ್ಗೆ ಮಾಹಿತಿಯನ್ನು ತಿಳಿಸಿದರು. ನೆಲ್ಯಾಡಿ ಗ್ರಾಮ ಪಂಚಾಯಿತಿನ ಅಧ್ಯಕ್ಷ ಸಲಾಂ ಬಿಲಾಲ್, ಕೌಕ್ರಾಡಿ ಗ್ರಾಮ ಪಂಚಾಯಿತಿನ ಅಧ್ಯಕ್ಷ ಲೋಕೇಶ್ ಬಾಣಜಾಲ್, ನೆಲ್ಯಾಡಿ ಜೇಸಿಐ ಅಧ್ಯಕ್ಷೆ ಶ್ರೀಮತಿ ಸುಚಿತ್ರ ಜೆ ಬಂಟ್ರಿಯಾಲ್ ಸಂದರ್ಭೋಚಿತವಾಗಿ ಮಾತನಾಡಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.
ವೇದಿಕೆಯಲ್ಲಿ ನೆಲ್ಯಾಡಿ- ಕೌಕ್ರಾಡಿ ವರ್ತಕ ಮತ್ತು ಕೈಗಾರಿಕಾ ಸಂಘದ ನೂತನ ಅಧ್ಯಕ್ಷರಾದ ಸತೀಶ್ ಕೆ.ಎಸ್. ಕಾರ್ಯದರ್ಶಿ ಪ್ರಶಾಂತ್ ಸಿ.ಎಚ್. ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ನಿರ್ಗಮನ ಅಧ್ಯಕ್ಷರಾದ ರಫೀಕ್ ಸೀಗಲ್ ಅವರನ್ನು ಸನ್ಮಾನಿಸಲಾಯಿತು.
ಶ್ರೀಮತಿ ಉಷಾ ಅಂಚನ್ ಸ್ವಾಗತಿಸಿದರು. ಗತಕಾಲದ ವರದಿಯನ್ನು ಗಣೇಶ್.ಕೆ ರಶ್ಮಿ ಸಭೆಗೆ ಮಂಡಿಸಿದರು. ಉಪಾಧ್ಯಕ್ಷರಾದ ನಾಝಿಂ ಸಾಹೇಬ್ ಪದಾಧಿಕಾರಿಗಳ ಪಟ್ಟಿಯನ್ನು ವಾಚಿಸಿದರು. ಸಂಘದ ಕಾನೂನು ಸಲಹೆಗಾರ ಇಸ್ಮಾಯಿಲ್ ನೆಲ್ಯಾಡಿ ನೋಟರಿ ವಕೀಲರು ವಂದಿಸಿದರು.