ಸ್ಕೂಟರ್‌ಗೆ ಬಸ್ ಡಿಕ್ಕಿ – ವಿದ್ಯಾರ್ಥಿನಿ ಸ್ಥಳದಲ್ಲೇ ಸಾವು

ಶೇರ್ ಮಾಡಿ

ಸ್ಕೂಟರ್‌ಗೆ ಬಿಎಂಟಿಸಿ ಬಸ್ ಡಿಕ್ಕಿಯಾಗಿ ಕಾಲೇಜಿಗೆ ತೆರಳುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಸಾವಿಗೀಡಾದ ಘಟನೆ ಮಲ್ಲೇಶ್ವರಂನ ಹರಿಶ್ಚಂದ್ರ ಘಾಟ್ ಬಳಿ ನಡೆದಿದೆ.

ಡಿಗ್ರಿ ವ್ಯಾಸಾಂಗ ಮಾಡುತ್ತಿದ್ದ ವಿದ್ಯಾರ್ಥಿನಿ ಕುಸುಮಿತ (22) ಸ್ಕೂಟರ್‌ನಲ್ಲಿ ಕಾಲೇಜಿಗೆ ತೆರಳುತ್ತಿದ್ದ ವೇಳೆ ಬಸ್ ಡಿಕ್ಕಿಯಾಗಿದೆ. ಕೂಡಲೇ ಆಕೆಯನ್ನು ಸ್ಥಳೀಯ ಕೆಸಿ ಜನರಲ್ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೂ, ಚಿಕಿತ್ಸೆ ಫಲಕಾರಿಯಾಗದೇ ಆಕೆ ಸಾವನ್ನಪ್ಪಿದ್ದಾಳೆ.

ಘಟನೆಯಲ್ಲಿ ಯಾರ ನಿರ್ಲಕ್ಷ್ಯ ನಡೆದಿದೆ ಎಂಬ ಬಗ್ಗೆ ಪೊಲೀಸರಿಂದ ತನಿಖೆ ನಡೆಸುತ್ತಿದ್ದಾರೆ. ಇನ್ನೂ ಘಟನೆಗೆ ವೇಗವಾಗಿ ಬಸ್ ಚಲಾಯಿಸಿದ್ದೇ ಕಾರಣ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಮಲ್ಲೇಶ್ವರಂ ಟ್ರಾಫಿಕ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Leave a Reply

error: Content is protected !!