ರೈಲು ಡಿಕ್ಕಿ;ಕೂಲಿ ಕಾರ್ಮಿಕ ಸ್ಥಳದಲ್ಲೇ ಸಾವು

ಶೇರ್ ಮಾಡಿ

ರೈಲು ಡಿಕ್ಕಿಯಾಗಿ ಕೂಲಿ ಕಾರ್ಮಿಕನೋರ್ವ ಸ್ಥಳದಲ್ಲಿ ಮೃತಪಟ್ಟ ಘಟನೆ ಬಿಸಿರೋಡು ಸಮೀಪದ ‌ಮಾರ್ನಬೈಲು ಎಂಬಲ್ಲಿ ಫೆ.5 (ಇಂದು) ಬೆಳಿಗ್ಗೆ ಸುಮಾರು 7.30 ಗಂಟೆಗೆ ಸಂಭವಿಸಿದೆ.

ಮೂಲತಃ ಮಡಂತ್ಯಾರು ಪಣಕಜೆ ನಿವಾಸಿಯಾಗಿದ್ದು, ಪ್ರಸ್ತುತ ಸಜೀಪಮುನ್ನೂರು ಗ್ರಾ.ಪಂ. ವ್ಯಾಪ್ತಿಯ ಮಾರ್ನಬೈಲು ದಾಸರ ಗುಡ್ಡೆ ಎಂಬಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಹರಿಶ್ಚಂದ್ರ (37) ಮೃತಪಟ್ಟ ವ್ಯಕ್ತಿ.

ಕೂಲಿ ಕಾರ್ಮಿಕನಾಗಿರುವ ಹರಿಶ್ಚಂದ್ರ ಇಂದು ಬೆಳಿಗ್ಗೆ ಮನೆಯಿಂದ ಕೆಲಸಕ್ಕೆ ತೆರಳುವ ಸಂದರ್ಭದಲ್ಲಿ ರೈಲ್ವೆ ಹಳಿಯನ್ನು ದಾಟುವ ಉದ್ದೇಶದಿಂದ ನಿಂತಿದ್ದ ವೇಳೆ ರೈಲು ಡಿಕ್ಕಿ ಹೊಡೆದಿರಬೇಕು ಎಂದು ಸ್ಥಳೀಯರು ತಿಳಿಸಿದ್ದಾರೆ.

ರೈಲು ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡ ಹರಿಶ್ಚಂದ್ರ ಸ್ಥಳದಲ್ಲಿಯೇ ಮೃತಪಟ್ಟಿದ್ದರು. ಡಿಕ್ಕಿಯಾದ ಕೂಡಲೇ ರೈಲ್ವೆ ಇಲಾಖೆಯ ಹಳಿಯ ಕಾಮಗಾರಿ ನೋಡಿಕೊಳ್ಳುವ ಸಿಬ್ಬಂದಿಗಳಿಗೆ ಮಾಹಿತಿ ಸಿಕ್ಕಿದ್ದು, ಅವರು ಮಂಗಳೂರು ರೈಲ್ವೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ರೈಲ್ವೆ ಪೋಲೀಸ್ ಇಲಾಖೆಯ ಎ.ಎಸ್.ಐ.ಜಾನ್ ಕೊರಿಯ ಕೋಸ್ ಸ್ಥಳಕ್ಕೆ ‌ಆಗಮಿಸಿ, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಸಾಗಿಸಿದ್ದಾರೆ.ಘಟನೆಯ ಮಾಹಿತಿ ಸಿಕ್ಕಿದ ಕೂಡಲೇ ಹೊಯ್ಸಳ 112 ವಾಹನದ ಜೊತೆ ಎಎಸ್ ಐ ದೇವಪ್ಪ ಹಾಗೂ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿದ್ದಾರೆ.

Leave a Reply

error: Content is protected !!