ಕಾಲೇಜು ವಿದ್ಯಾರ್ಥಿ ನೇಣಿಗೆ ಶರಣು

ಶೇರ್ ಮಾಡಿ

ಉಪ್ಪಿನಂಗಡಿಯ ಪೆರಿಯಡ್ಕ ನಿವಾಸಿ ಹಾಗೂ ಮಡಂತ್ಯಾರಿನ ಕಾಲೇಜೊಂದರಲ್ಲಿ ದ್ವಿತೀಯ ವರ್ಷದ ಪದವಿ ವ್ಯಾಸಂಗ ಮಾಡುತ್ತಿದ್ದ ಕಾಲೇಜು ವಿದ್ಯಾರ್ಥಿ ಅತ್ತಾವುಲ್ಲಾ (22) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಪ್ಪಿನಂಗಡಿಯಲ್ಲಿ ನಡೆದಿದೆ.

ಅತ್ತಾವುಲ್ಲಾ ತಾಯಿಯೊಂದಿಗೆ ವಾಸವಾಗಿದ್ದ ಅತ್ತಾವುಲ್ಲಾ. ಒಂದೂವರೆ ತಿಂಗಳಿನಿಂದ ಕಾಲೇಜಿಗೆ ಹೋಗದೇ ಮನೆಯಲ್ಲಿದ್ದು ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಎನ್ನಲಾಗಿದೆ. ಫೆ.14ರಂದು ನೆರೆಮನೆಯ ಮೆಹಂದಿ ಕಾರ್ಯಕ್ರಮಕ್ಕೆ ಹೋಗಿ ವಾಪಾಸ್ಸು ಮನೆಗೆ ಬಂದಿದ್ದ ಅತ್ತಾವುಲ್ಲಾ ಕೋಣೆಯೊಳಗೆ ತೆರಳಿ ನೇಣು ಬಿಗಿದುಕೊಂಡಿದ್ದಾನೆ. ಜೀವನದಲ್ಲಿ ಜಿಗುಪ್ಸೆ ಹೊಂದಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಮನೆಯವರು ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

Leave a Reply

error: Content is protected !!