ಕರ್ನಾಟಕ ರಾಜ್ಯ ಸರಕಾರ ಜಿಲ್ಲಾ ಆಡಳಿತ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಬೆಳ್ತಂಗಡಿ, ಸಮಾಜ ಕಲ್ಯಾಣ ಇಲಾಖೆ ಮತ್ತು ಗ್ರಾಮ ಪಂಚಾಯತ್ ನಿಡ್ಲೆ ಇವುಗಳ ಸಂಯುಕ್ತ ಆಶ್ರಯದಲ್ಲಿ ಫೆ.16ರಂದು ನಿಡ್ಲೆ ಗ್ರಾಮ ಪಂಚಾಯತ್ ನಲ್ಲಿ ಸಂವಿಧಾನ ದಿನಾಚರಣೆಯ ಪ್ರಯುಕ್ತ ಗ್ರಾಮಕ್ಕೆ ಆಗಮಿಸಿದ ರಥವನ್ನು ಬರೆಂಗಾಯ ದಲ್ಲಿ ಸ್ವಾಗತಿಸಿ, ಬೈಕ್ ಜಾಥಾ ಹಾಗೂ ಸ.ಉ.ಹಿ.ಪ್ರಾ. ಶಾಲೆ ಬರೆಂಗಾಯದ ಶಾಲಾ ಮಕ್ಕಳು ಬ್ಯಾಂಡ್ ವಾದ್ಯಗಳೊಂದಿಗೆ ಗ್ರಾಮ ಪಂಚಾಯಿತಿ ಕಛೇರಿ ವರೆಗೆ ಜಾಥ ಮೂಲಕ ಕರೆತರಲಾಯಿತು.
ಸಂವಿಧಾನ ಜಾಥಾ ರಥದ ಮಹತ್ವವನ್ನು ಸೇರಿದ ವೀಕ್ಷಕರಿಗೆ ವಿವರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಸರ್ವಸದಸ್ಯರು, ಸಮಾಜ ಕಲ್ಯಾಣ ಇಲಾಖಾಧಿಕಾರಿಗಳು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖಾಧಿಕಾರಿಗಳು ಶಾಲಾ ಶಿಕ್ಷಕ ವೃಂದ, ಶಾಲಾ ಮಕ್ಕಳು, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ಆರೋಗ್ಯ ಇಲಾಖಾಧಿಕಾರಿಗಳು, ಮಹಿಳಾ ಸಂಜೀವಿನಿ ಒಕ್ಕೂಟದ ಸದಸ್ಯರು, ಪಂಚಾಯಿತಿ ಸಿಬ್ಬಂದಿ ವರ್ಗ, ಬೆಳ್ತಂಗಡಿ ತಾಲೂಕು ಪಂಚಾಯಿತಿ ನ ವಿನಿಷಾ ರವರು ಭಾಗವಹಿಸಿದ್ದರು.
ಪಂಚಾಯಿತಿ ಅಭಿವೃಧ್ಧಿ ಅಧಿಕಾರಿಯವರು ಸ್ವಾಗತಿಸಿ, ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ ಹೇಮಲತಾರವರು ಸಂವಿಧಾನ ಪ್ರತಿಜ್ಞಾ ವಿಧಿ ಬೋದಿಸಿದರು, ಪಂಚಾಯತ್ ಕಾರ್ಯದರ್ಶಿ ಕೆ.ಪಿ. ಕೇಶವ ಗೌಡ ರವರು ಕಾರ್ಯಕ್ರಮ ನಿರೂಪಿಸಿ ಧನ್ಯವಾದಗಳನ್ನು ಸಲ್ಲಿಸಿದರು.