ನೆಲ್ಯಾಡಿ: ಮರದಿಂದ ಬಿದ್ದು ಮೃತ್ಯು

ಶೇರ್ ಮಾಡಿ

ನೆಲ್ಯಾಡಿ: ಮರದಿಂದ ಬಿದ್ದು ವ್ಯಕ್ತಿಯೋರ್ವರು ಮೃತಪಟ್ಟಿರುವ ಘಟನೆ ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ನೆಲ್ಯಾಡಿ ಹೊಸಮಜಲು ಎಂಬಲ್ಲಿ ಫೆ.18ರಂದು ಸಂಜೆ ನಡೆದಿದೆ.

ಬಲ್ಯ ಗ್ರಾಮದ ಹೊಸಮನೆ ನಿವಾಸಿ ರಮೇಶ (48ವ.)ಮೃತಪಟ್ಟವರಾಗಿದ್ದಾರೆ. ರಮೇಶ್ ಅವರು ಬೆಂಗಳೂರಿನಲ್ಲಿ ಲಾರಿ ಚಾಲಕರಾಗಿದ್ದು ಪತ್ನಿ ಹಾಗೂ ಮಕ್ಕಳೊಂದಿಗೆ ಹೊಸಮಜಲುನಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ರಜೆಯಲ್ಲಿ ಊರಿಗೆ ಬಂದಿದ್ದ ಅವರು ಫೆ.18ರಂದು ಸಂಜೆ ಹೊಸಮಜಲುನಲ್ಲಿ ಮನೆ ಸಮೀಪದ ಮಾವಿನ ಮರಕ್ಕೆ ಮಾವಿನ ಮಿಡಿ ಕೊಯ್ಯಲೆಂದು ಹತ್ತಿದ್ದವರು ಆಕಸ್ಮಿಕವಾಗಿ ಕೆಳಕ್ಕೆ ಬಿದ್ದ ಅವರನ್ನು ನೆಲ್ಯಾಡಿಯ ಖಾಸಗಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆಯನ್ನು ನೀಡಿ ಬಳಿಕ ಪುತ್ತೂರಿನ ಸರಕಾರಿ ಆಸ್ಪತ್ರೆಗೆ ಕೊಂಡೊಯ್ಯಲಾಯಿತು ಗಂಭೀರ ಗಾಯಗೊಂಡು ಮೃತಪಟ್ಟಿದ್ದಾರೆ.
ಈ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಮೃತರ ಪತ್ನಿ ಶ್ರೀಮತಿ ಮೋಹಿನಿ ನೀಡಿದ ದೂರಿನ ಮೇಲೆ ಪ್ರಕರಣ ದಾಖಲಾಗಿದೆ.

ಮೃತರು ತಾಯಿ, ಪತ್ನಿ, ಓರ್ವ ಪುತ್ರ, ಓರ್ವ ಪುತ್ರಿ ಹಾಗೂ ಇಬ್ಬರು ಸಹೋದರಿಯರನ್ನು ಇದ್ದಾರೆ.

Leave a Reply

error: Content is protected !!