ಹತ್ಯಡ್ಕ ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರದಲ್ಲಿ ಶ್ರೀ ದೇವರ ಪ್ರತಿಷ್ಠೆ

ಶೇರ್ ಮಾಡಿ

ಅರಸಿನಮಕ್ಕಿ: ಹತ್ಯಡ್ಕ ಗ್ರಾಮದ ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರದಲ್ಲಿ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವದ ಅಂಗವಾಗಿ ಫೆ.22 ರಂದು ಬ್ರಹ್ಮಶ್ರೀ ವೇದಮೂರ್ತಿ ಪೊಳಲಿ ಶ್ರೀ ಸುಬ್ರಹ್ಮಣ್ಯ ತಂತ್ರಿಗಳ ನೇತೃತ್ವದಲ್ಲಿ ಶ್ರೀ ದೇವರ ಪ್ರತಿಷ್ಠೆಯು ನಡೆಯಿತು.
ಬೆಳಿಗ್ಗೆ ರೆಖ್ಯ ಗ್ರಾಮಸ್ಥರಿಂದ ಹೊರಕಾಣಿಕೆ ಸಮರ್ಪಣೆ, ಗಣಪತಿ ಹೋಮ, ಶ್ರೀ ದೇವರ ಪ್ರತಿಷ್ಠೆ, ಜೀವಕಲಶಾಭಿಷೇಕ, ಅಷ್ಠಬಂಧ ಪ್ರತಿಷ್ಠೆ, ಪರಿವಾರಗಳ ಪ್ರತಿಷ್ಠೆ, ಪ್ರತಿಷ್ಠಾ ಪೂಜೆ ಜರುಗಿತು.

ಈ ಸಂದರ್ಭದಲ್ಲಿ ಜೀರ್ಣೋದ್ದಾರ ಸಮಿತಿ ಅಧ್ಯಕ್ಷ ಪ್ರಕಾಶ್ ಪಿಲಿಕ್ಕಬೆ, ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಶ್ರೀರಂಗ ದಾಮ್ಲೆ, ಆಡಳಿತ ಸಮಿತಿ ಅಧ್ಯಕ್ಷ ಪದ್ಮಯ್ಯ ಬಾರಿಗ, ಸಂಚಾಲಕ ಬಿ. ಜಯರಾಮ್ ನೆಲ್ಲಿತ್ತಾಯ ಕಾರ್ಯದರ್ಶಿ ಮುರಳೀಧರ ಶೆಟ್ಟಿಗಾರ್, ಬ್ರಹ್ಮಕಲಶೋತ್ಸವ ಸಮಿತಿ ಕೋಶಾಧಿಕಾರಿ ಕೇಶವ ರಾವ್ ನೆಕ್ಕಿಲು, ಸಹಸಂಚಾಲಕ ಜಯಪ್ರಸಾದ್ ಶೆಟ್ಟಿಗಾರ್, ಅರ್ಚಕ ಉಲ್ಲಾಸ್ ಭಟ್ ಅಂತರ, ಹೊರೆಕಾಣಿಕೆ ಸಮಿತಿ ಸಂಚಾಲಕ ರಾಘವ ಗೌಡ ಮೀಯಾಳ, ಮಾಧ್ಯಮ ಮತ್ತು ಪ್ರಚಾರ ಸಮಿತಿಯ ಸಂಚಾಲಕ ವೃಶಾಂಕ್ ಖಾಡಿಲ್ಕರ್, ಬ್ರಹ್ಮಕಲಶೋತ್ಸವ ಸಮಿತಿಯ ಉಪಾಧ್ಯಕ್ಷರು, ಬ್ರಹ್ಮಕಲಶೋತ್ಸವ-ಜೀರ್ಣೋದ್ದಾರ, ಆಡಳಿತ ಸಮಿತಿಗಳ ಸದಸ್ಯರು ಹಾಗೂ ಊರ ಪರವೂರ ಭಕ್ತಾದಿಗಳು ಉಪಸ್ಥಿತರಿದ್ದರು.

Leave a Reply

error: Content is protected !!