ರಾಜ್ಯ ವಿಧಾನಸಭೆ ಚುನಾವಣೆ: ಕಾಂಗ್ರೆಸ್ ಗೆ ಮೂರೂ, ಬಿಜೆಪಿಗೆ ಒಂದು, ಮೈತ್ರಿ ಅಭ್ಯರ್ಥಿಗೆ ಸೋಲು

ಶೇರ್ ಮಾಡಿ

ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಜಯಭೇರಿ ಸಾಧಿಸಿದೆ, ಬಿಜೆಪಿಯ ಓರ್ವ ಅಭ್ಯರ್ಥಿ ಗೆಲುವು ಸಾಧಿಸಿದ್ದು ಜೊತೆಗೆ ಬಿಜೆಪಿ- ಜೆಡಿಎಸ್ ಮೈತ್ರಿ ಅಭ್ಯರ್ಥಿ ಸೋಲು ಅನುಭವಿಸುವ ಮೂಲಕ ಮುಖಭಂಗ ಅನುಭವಿಸಿದ್ದಾರೆ.

ಇಂದು ನಡೆದ ಚುನಾವಣೆಯಲ್ಲಿ ಒಟ್ಟು 224 ಮತಗಳ ಪೈಕಿ ಒಟ್ಟು 222 ಮಂದಿ ಮತ ಚಲಾಯಿಸಿದ್ದಾರೆ. ಅದರಲ್ಲಿ ಯಲ್ಲಾಪುರದ ಬಿಜೆಪಿ ಶಾಸಕರಾದ ಶಿವರಾಮ ಹೆಬ್ಬಾರ್ ಅವರು ಮತದಾನ ಮಾಡದೆ ಗೈರಾಗಿದ್ದು, ಕಾಂಗ್ರೆಸ್‌ ಶಾಸಕ ರಾಜಾವೆಂಕಟಪ್ಪ ನಾಯಕ ಅವರು ಕಳೆದ ಭಾನುವಾರ(ಫೆ.25) ರಂದು ಮೃತಪಟ್ಟಿದ್ದಾರೆ. ಇದರೊಂದಿಗೆ ಒಟ್ಟು 222 ಮಂದಿ ಶಾಸಕರು ಮತದಾನ ಮಾಡಿದಂತಾಗಿದೆ.

ಅಡ್ಡ ಮತದಾನ ಮಾಡಿದ ಬಿಜೆಪಿ ಶಾಸಕ ಎಸ್.ಟಿ. ಸೋಮಶೇಖರ್
ಭಾರಿ ಕುತೂಹಲಕ್ಕೆ ಕಾರಣವಾಗಿದ್ದ ರಾಜ್ಯಸಭಾ ಚುನಾವಣೆಯಲ್ಲಿ ಯಶವಂತಪುರ ಶಾಸಕ ಎಸ್.ಟಿ. ಸೋಮಶೇಖರ್ ಅವರು ಕೊನೆ ಕ್ಷಣದಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ಮತದಾನ ಮಾಡುವ ಮೂಲಕ ಬಿಜೆಪಿಗೆ ಶಾಕ್ ನೀಡಿದ್ದಾರೆ. ಈಗಾಗಲೇ ಕಾಂಗ್ರೆಸ್ ನಾಯಕರ ಜೊತೆ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದ್ದ ಅವರು ಇಂದು ಅಡ್ಡ ಮತದಾನ ಮಾಡುವ ಮೂಲಕ ತಮ್ಮ ನಡೆಯನ್ನು ತೋರಿಸಿದ್ದಾರೆ.

Leave a Reply

error: Content is protected !!