ನಿಡ್ಲೆ ವಿಕಲಚೇತನರ ವಿಶೇಷ ಗ್ರಾಮ ಸಭೆ

ಶೇರ್ ಮಾಡಿ

ನಿಡ್ಲೆ ಗ್ರಾಮದ ವಿಕಲಚೇತನರ ವಿಶೇಷ ಗ್ರಾಮ ಸಭೆ ನಿಡ್ಲೆ ಗ್ರಾಮ ಪಂಚಾಯತ್ ಸಭಾಂಗಣ ದಲ್ಲಿ ಫೆ.27 ರಂದು ಗ್ರಾಮ ಪಂಚಾಯಿತಿನ ಅಧ್ಯಕ್ಷರಾದ ಶ್ರೀಮತಿ ಶ್ಯಾಮಲ ಇವರ ಅಧ್ಯಕ್ಷತೆ ಯಲ್ಲಿ ನಡೆಸಲಾಯಿತು.

ಮುಖ್ಯ ಅತಿಥಿಗಳಾಗಿ ಪಂಚಾಯಿತಿನ ಅಭಿವೃದ್ಧಿ ಅಧಿಕಾರಿ ದೀಪಕ್ ರಾಜ್.ಎಂ, ಗ್ರಾಮ ಪಂಚಾಯಿತಿನ ಸದಸ್ಯರಾದ ಶ್ರೀಮತಿ ಹೇಮಾವತಿ.ಕೆ, ಮೋಹನ್ ಪೂಜಾರಿ, ಜಗದೀಶ್ ಶೆಟ್ಟಿ ಉಪಸ್ಥಿತರಿದ್ದರು.

ಬೆಳ್ತಂಗಡಿ ತಾಲೂಕಿನ ಪುನರ್ ವಸತಿ ಸಂಯೋಜಕರಾದ ಜೋನ್ ಬ್ಯಾಪ್ಟಿಸ್ಟ್ ಡಿಸೋಜಾ ಸರಕಾರದಿಂದ ಸಿಗುವ ಸೌಲಭ್ಯಗಳ ಬಗ್ಗೆ ಮಾಹಿತಿಯನ್ನು ನೀಡಿದರು. ನಿಡ್ಲೆ ಸಮುದಾಯ ಆರೋಗ್ಯ ಕೇಂದ್ರ ಸಮುದಾಯ ಅಧಿಕಾರಿ ಶ್ರೀಮತಿ ವಿನುತಾ ರವರು ಆರೋಗ್ಯದ ಬಗ್ಗೆ ಮಾಹಿತಿಯನ್ನು ನೀಡಿದರು.

ಗ್ರಾಮ ಸಭೆಯಲ್ಲಿ ಗ್ರಾಮೀಣ ವಿಕಲಚೇತನರ ಪುನರ್ವಸತಿ ಕಾರ್ಯಕರ್ತೆಯಾದ ಕುಮಾರಿ ಹೇಮಲತಾ ಇವರು ವಾರ್ಷಿಕ ವರದಿಯನ್ನು ಮಂಡಿಸಿದರು. ಈ ಗ್ರಾಮ ಸಭೆಯಲ್ಲಿ ಒಟ್ಟು ಆರು ಜನ ವಿಕಲ ಚೇತನ ವಿದ್ಯಾರ್ಥಿಗಳಿಗೆ ಸ್ಕೂಲ್ ಬ್ಯಾಗ್ ಹಾಗೂ ನೀರಿನ ಬಾಟಲಿಗಳನ್ನು ವಿತರಿಸಲಾಯಿತು.

ಈ ಸಂದರ್ಭದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಿಕಲಚೇತನ ಫಲಾನುಭವಿಗಳು, ಆಶಾ ಕಾರ್ಯಕರ್ತೆಯರು, ಪಂಚಾಯಿತಿನ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು ಪಂಚಾಯತ್ ಪಂಚಾಯತ್ ಅಭಿವೃದ್ದಿ ಅಧಿಕಾರಿ ದೀಪಕ್ ರಾಜ್.ಎಂ ಸ್ವಾಗತಿಸಿದರು, ಕಾರ್ಯದರ್ಶಿಯಾದ ಕೆ.ಪಿ.ಕೇಶವ ಗೌಡ ನಿರೂಪಿಸಿದರು.

Leave a Reply

error: Content is protected !!